ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ | ಶಿವಲಿಂಗ ವಿರೂಪಗೊಳಿಸಿದ ಕಿಡಿಗೇಡಿಗಳು: ಆಕ್ರೋಶ

Published 4 ಫೆಬ್ರುವರಿ 2024, 15:39 IST
Last Updated 4 ಫೆಬ್ರುವರಿ 2024, 15:39 IST
ಅಕ್ಷರ ಗಾತ್ರ

ಶಿರಸಿ: ಶಿವಲಿಂಗದ ಮೇಲೆ ಚಾಕ್‌ಪೀಸ್‌ನಿಂದ ಇಂಗ್ಲಿಷ್ ಅಕ್ಷರ ಬರೆದು ವಿರೂಪಗೊಳಿಸಿದ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ತಾಲ್ಲೂಕಿನ ನರಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದಿದೆ.

ಗರ್ಭಗುಡಿಯ ಶಿವಲಿಂಗದ ಮೇಲೆ ಜೆ.ಇ.ಎಸ್ 2024, 2026 ಎಂಬ ಇಂಗ್ಲಿಷ್ ಅಕ್ಷರ ಬರೆಯಲಾಗಿದೆ. ಪೂಜೆಗೆ ಬಂದ ಪುರೋಹಿತರು ಗರ್ಭಗುಡಿಯ ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದಲ್ಲಿ ಯಾವುದೇ ಕಳವಾಗಿಲ್ಲ, ಯಾರೂ ಇಲ್ಲದ ವೇಳೆ ಈ ರೀತಿ ವಿರೂಪ ಮಾಡಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಕರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT