ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲಾಧಾರಿತ ಪಠ್ಯ ವಿಷಯ ಬೋಧಿಸಿ: ವಿಶ್ವೇಶ್ವರ ಹೆಗಡೆ ಕಾಗೇರಿ

Published 18 ನವೆಂಬರ್ 2023, 13:48 IST
Last Updated 18 ನವೆಂಬರ್ 2023, 13:48 IST
ಅಕ್ಷರ ಗಾತ್ರ

ಶಿರಸಿ: ‘ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪಾರಂಪರಿಕ ಬೋಧನಾ ವಿಧಾನ ಬದಲಿಸಿ ಕೌಶಲಾಧಾರಿತ ಪಠ್ಯ ವಿಷಯ ಬೋಧಿಸಬೇಕಾದ ಅನಿವಾರ್ಯತೆಯಿದೆ’ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲ್ಲೂಕಿನ ಬರೂರು ಜನತಾ ವಿದ್ಯಾಲಯದಲ್ಲಿ ಶುಕ್ರವಾರ ಪೂರ್ವ ವಿದ್ಯಾರ್ಥಿಗಳ ಸಮ್ಮೇಳನ ಉದ್ಘಾಟಿಸಿ  ಮಾತನಾಡಿದ ಅವರು, ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಉಳಿವಿಗೆ ಆಯಾ ಶಿಕ್ಷಣ ಸಂಸ್ಥೆಗಳ ಪೂರ್ವ ವಿದ್ಯಾರ್ಥಿಗಳು ತಮ್ಮ ಸಹಾಯಹಸ್ತ ಚಾಚಬೇಕು’ ಎಂದರು.

ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಉಪನ್ಯಾಸ ನೀಡಿದ ಕೆನರಾ ವೆಲ್‌ ಫೆರ್ ಟ್ರಸ್ಟ್‌ನ ಟ್ರಸ್ಟಿ ಡಾ.ವಿ.ಎನ್.ನಾಯಕ, ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸನಿಹದಲ್ಲಿಯೇ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿರುವುದು, ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳ ವ್ಯಾಮೋಹ, ತೆರವಾದ ಹುದ್ದೆಗಳನ್ನು ತುಂಬಿಕೊಳ್ಳಲು ಇಲಾಖೆಯ ಅನುಮತಿ ದೊರೆಯದೇ ಇರುವುದು, ಸಮರ್ಥ ಶಿಕ್ಷಕ, ಸಿಬ್ಬಂದಿ ಕೊರತೆ ಮುಂತಾದ ಸಮಸ್ಯೆಗಳು ಕನ್ನಡ ಮಾಧ್ಯಮ ಅನುದಾನಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿವೆ. ಇಂಥ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬೇಕಿದೆ’ ಎಂದು  ಹೇಳಿದರು.

ಸ್ಥಳೀಯರಾದ ಭಾಗೀರಥಿ ಜೋಶಿ ಕಾನ್ಮೂಲೆ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಪೂರ್ವ ವಿದ್ಯಾರ್ಥಿಗಳಾದ ಎಂ.ಎಸ್. ಭಟ್ ಬೆಳಖಂಡ, ಜಿ.ಡಿ.ಭಟ್, ನೇತ್ರಾವತಿ ಹೆಗಡೆ, ಗುರುನಾಥ ಹೆಗಡೆ, ನೇತ್ರಾವತಿ ಭಟ್ ಮುಂತಾದವರು ಮಾತನಾಡಿದರು. ಮುಖ್ಯಶಿಕ್ಷಕ ವಿನೋದ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT