ಶಿರಸಿ: ‘ನಗರದ ಕಸವನ್ನು ಅವೈಜ್ಞಾನಿಕವಾಗಿ ಎಸೆಯುತ್ತಿ ರುವುದರಿಂದ ಲಾಲಗೌಡನಗರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲು ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಭೀಮಣ್ಣ ನಾಯ್ಕ ಭರವಸೆ ನೀಡಿದರು.

ದೊಡ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಲಗೌಡನಗರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದ ಅವರು, ಜನವಸತಿ ಪ್ರದೇಶದಲ್ಲಿ ಕಸ ಎಸೆಯುವುದರಿಂದ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಗರದ ಕಸವನ್ನು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ತಂದು ಸುರಿಯುತ್ತಿರುವ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಶಾಸಕರ ಮುಂದೆ ಅಳಲು ತೋಡಿಕೊಂಡರು. ಕಸ ಎಸೆಯುತ್ತಿರುವುದರಿಂದ ಗ್ರಾಮದಾದ್ಯಂತ ದುರ್ನಾತ ಹರಡುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಕಸದ ರಾಶಿಯು ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿ ಮಾಡುತ್ತಿದ್ದು, ಈ ನರಕಸದೃಶ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಗ್ರಾಮಸ್ಥರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಭೀಮಣ್ಣ ನಾಯ್ಕ, ‘ಕಸ ಎಸೆಯುತ್ತಿರುವುದರಿಂದ ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ತಮಗೆ ಅರಿವಿದ್ದು, ಈ ಬಗ್ಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಇದರೊಂದಿಗೆ ಗ್ರಾಮದ ರಸ್ತೆ, ನೀರು ಹಾಗೂ ವಿದ್ಯುತ್ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-20-1414996866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.