ಭಟ್ಕಳ: ತಾಲ್ಲೂಕಿನ ಪ್ರಸಿದ್ಧ ಸೋಡಿಗದ್ದೆ ಮಹಾಸತಿ ದೇವಿಯ ಜಾತ್ರೆ ಅಂಗವಾಗಿ ಶನಿವಾರ ವಿಶೇಷ ಕೆಂಡ ಸೇವೆ ಜರಗಿತು. ಸಾವಿರಾರು ಭಕ್ತರು ಕೆಂಡ ಸೇವೆ ಮಾಡಿ ದೇವರಿಗೆ ಹರಕೆ ಒಪ್ಪಿಸಿದರು.

ಬೆಳಿಗ್ಗೆ ಆರಂಭವಾದ ಕೆಂಡ ಸೇವೆಯಲ್ಲಿ ಭಕ್ತರು ಶ್ರದ್ಧಾ– ಭಕ್ತಿಯಿಂದ ಪಾಲ್ಗೊಂಡಿದ್ದರು. ಚಿಕ್ಕ ಮಕ್ಕಳನ್ನು ಪೂಜಾರಿಗಳು ಹಾಗೂ ಪೋಷಕರು ಎತ್ತಿಕೊಂಡು ಕೆಂಡ ಹಾಯ್ದರೆ, ಹಲವರು ಭಕ್ತರು ಕೆಂಡದ ಮೇಲೆ ನಡೆದು ತಮ್ಮ ಹರಕೆ ತೀರಿಸಿದರು.

ಜಾತ್ರೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿ ಮಹಾಸತಿ ಅಮ್ಮನವರ ದರ್ಶನ ಪಡೆದರು. ಈ ಹೂವಿನ ಪೂಜೆ, ಬಂಗಾರದ ತೊಟ್ಟಿಲು ಸಮರ್ಪಣೆ, ಬೆಳ್ಳಿ, ಬಂಗಾರದ ಕಣ್ಣು, ಬಂಗಾರದ ಆಭರಣ ಇತ್ಯಾದಿಗಳನ್ನು ಭಕ್ತಿ ಪೂರ್ವಕವಾಗಿ ದೇವಿಗೆ ಸಮರ್ಪಿಸುವ ಕಾರ್ಯವೂ ಭಕ್ತರಿಂದ ನಡೆಯುತ್ತದೆ. 9 ದಿನ ವಿಜೃಂಭಣೆಯಿಂದ ನಡೆಯುವ ಜಾತ್ರೆಯಲ್ಲಿ ನಿತ್ಯ ಸಾವಿರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಾರೆ.

ಪ್ರತಿ ವರ್ಷದಂತೆ ದಕ್ಷಿಣ ಕನ್ನಡ ಜಿಲ್ಲೆಯ ಭಕ್ತರು ಎತ್ತಿನ ಗಾಡಿ ಸಿಂಗರಿಸಿಕೊಂಡು, ತಮ್ಮ ಹರಕೆ ತೀರಿಸಿದರಲ್ಲದೇ, ಜಾತ್ರೆಗೆ ಸಾಂಪ್ರದಾಯಿಕ ಮೆರುಗು ತಂದರು.

ಜಾತ್ರೆಯಲ್ಲಿ ಅನಾಹುತವಾಗದಂತ ಸಲುವಾಗಿ, ದೇವಸ್ಥಾನ ಅಭಿವೃದ್ಧಿ ಸಮಿತಿ, ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಹಾಗೂ ಪೊಲೀಸರು ಸುಸಜ್ಜಿತ ಭದ್ರತಾ ವ್ಯವಸ್ಥೆ ಕಲಿಸಿದ್ದರು.

ಜಾತ್ರೆಯ ಸಮಯದಲ್ಲಿ ನಿತ್ಯ ಅನ್ನ ಸಂತರ್ಪಣೆ ಸೇವೆ ನಡೆಯಲಿದ್ದು, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ನಡೆಯಲಿದೆ. ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ನಾಗೇಂದ್ರಕೊಳಶೆಟ್ಟಿ, ಆಡಳಿತ ಕಮಿಟಿಯ ಅಧ್ಯಕ್ಷ ದೇವಿದಾಸ ಮೊಗೇರ ಕಾರ್ಯದರ್ಶಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.