ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯ ಹುಟ್ಟಿಸುವವರ ಬಗ್ಗೆ ಎಚ್ಚರವಿರಲಿ

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ
Last Updated 5 ಡಿಸೆಂಬರ್ 2022, 13:00 IST
ಅಕ್ಷರ ಗಾತ್ರ

ಶಿರಸಿ: ‘ಅರಣ್ಯ ಅತಿಕ್ರಮಣದಾರರ ದಾರಿ ತಪ್ಪಿಸಿ ಅವರ ಮುಗ್ಧತೆ ದುರ್ಬಳಕೆ ಮಾಡಿಕೊಳ್ಳುವವರ ಬಗ್ಗೆ ಎಚ್ಚರಿಕೆ ಇರಲಿ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲ್ಲೂಕಿನ ಮೇಲಿನ ಓಣಿಕೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸೋಮವಾರ ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.

‘ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ವದಂತಿ ಹಬ್ಬಿಸುವವರಿಂದ ಜನರು ಭಯಭೀತರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡಲು ಅವಕಾಶವಿದೆ. ಆದರೆ ಜನರನ್ನು ದಾರಿ ತಪ್ಪಿಸುವ ಹೋರಾಟ ನಡೆಯಬಾರದು. ಯಾವುದೇ ಕಾರಣಕ್ಕೂ ಅತಿಕ್ರಮಣದಾರನ್ನು ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ’ ಎಂದರು.

‘ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಪಕ್ಷಾತೀತವಾಗಿ ಅತಿಕ್ರಮಣದಾರರ ಪರ ಧ್ವನಿ ಎತ್ತಿದ್ದೇವೆ. ಒಟ್ಟಾರೆ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೂ ಕಳಿಸಲಾಗಿದೆ. ಅತಿಕ್ರಮಣದಾರರು ವಾಸಿಸುವ ಪ್ರದೇಶಕ್ಕೆ ಅಗತ್ಯ ಸೌಕರ್ಯ ಕಲ್ಪಿಸಿ ಹಿತರಕ್ಷಣೆಗೆ ಬೇಕಾದ ಕೆಲಸ ಮಾಡುತ್ತಿದ್ದೇವೆ’ ಎಂದರು.

‘ಸುಪ್ರಿಂಕೋರ್ಟ್‍ನಲ್ಲಿ ಅತಿಕ್ರಮಣದಾರರ ಹಿತ ಕಾಯಲು ಅಫಿಡವಿಟ್ ಸಲ್ಲಿಕೆಗೆ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ರಾಜ್ಯ ಸರ್ಕಾರದಿಂದ ಶೀಘ್ರ ಅಫಿಡವಿಟ್ ಸಲ್ಲಿಕೆಯಾಗಲಿದೆ. ಅರಣ್ಯ ಅತಿಕ್ರಮಣದಾರರಿಗೆ ಭೂಮಿ ಹಕ್ಕು ಮಂಜೂರಾತಿ ನೀಡಲು ಪ್ರಯತ್ನ ನಡೆದಿದೆ. ಕ್ಲಿಷ್ಟಕರ ನಿಯಮಾವಳಿ ಕಾರಣ ಅಡ್ಡಿಯಾಗುತ್ತಿದ್ದು ಅದನ್ನು ನಿವಾರಿಸಲು ಪ್ರಯತ್ನ ನಡೆದಿದೆ’ ಎಂದರು.

ಮೇಲಿನ ಓಣಿಕೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಾರದಾ ದೇವಾಡಿಗ, ಉಪಾಧ್ಯಕ್ಷೆ ರಾಜೇಶ್ವರಿ ಜೋಶಿ, ಸ್ಥಳೀಯ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT