ಶಿರಸಿ: ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸ್ಪೈಸ್ ಬೋರ್ಡ್ನ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನವಿಗೆ ಸ್ಪಂದಿಸಿದ ಸಚಿವರು, ಶಿರಸಿ ಮಾರುಕಟ್ಟೆಯ ಪ್ರಾಮುಖ್ಯತೆ ಗುರುತಿಸಿ ಈ ಕ್ರಮ ಕೈಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ವ್ಯಾಪಾರ ಕೇಂದ್ರವಾದ ಶಿರಸಿಯ ಕಾಳುಮೆಣಸು ಮಾರುಕಟ್ಟೆ ದರ ಇನ್ನು ಮುಂದೆ ಸ್ಪೈಸ್ ಬೋರ್ಡ್ನ ದಿನನಿತ್ಯದ ದರಪಟ್ಟಿಯಲ್ಲಿ ನಮೂದಾಗಲಿದೆ. ಇದರಿಂದ ಈ ಮಾರುಕಟ್ಟೆಯು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಆಗಲಿದೆ.

‘ಬೆಳೆಗಾರರ ಬೇಡಿಕೆ ಮೇರೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರದ ನಿರ್ಧಾರದಿಂದ ಶಿರಸಿ ಮತ್ತು ಸುತ್ತಮುತ್ತಲಿನ ಪ್ರದೇಶದ ಕಾಳುಮೆಣಸು ಬೆಳೆಗಾರರು ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ಬೆಲೆಗಳ ಪಾರದರ್ಶಕತೆ ಹೆಚ್ಚಲಿದೆ. ಜತೆಗೆ, ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆಗೂ ಸಹಕಾರಿಯಾಗಲಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.