ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಟ್ಕಳ | ಶ್ರೀನಿವಾಸ ನಾಯ್ಕ ಗಡಿಪಾರು: ತಡೆಯಾಜ್ಞೆ

Published 10 ಏಪ್ರಿಲ್ 2024, 14:18 IST
Last Updated 10 ಏಪ್ರಿಲ್ 2024, 14:18 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕು ಹಿಂದೂ ಸಂಘಟನೆಯ ಕಾರ್ಯಕರ್ತ ಹನುಮಾನ ನಗರದ ಶ್ರೀನಿವಾಸ ಮಾಸ್ತಪ್ಪ ನಾಯ್ಕ ಅವರಿಗೆ ಜಿಲ್ಲಾಧಿಕಾರಿ ಅವರು ನೀಡಿದ 1ವರ್ಷ ಗಡಿಪಾರು ಮಾಡುವ ನೋಟಿಸ್‌ಗೆ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಶ್ರೀನಿವಾಸ ನಾಯ್ಕ ಅವರ ಪರ ವಕೀಲ ನಾಗರಾಜ ನಾಯ್ಕ ಅವರು ವಾದ ಮಂಡಿಸಿ ಗಡಿಪಾರು ಪ್ರಕರಣಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ ನಾಯ್ಕರಿಗೆ ಜಿಲ್ಲಾಡಳಿತ ಈಚೆಗೆ ನೋಟಿಸ್‌ ಜಾರಿ ಮಾಡಿ 1 ವರ್ಷದ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದರ ವಿರುದ್ಧ ಶ್ರೀನಿವಾಸ ನಾಯ್ಕ ಅವರು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬುಧವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT