ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ರಾಜ್ಯಮಟ್ಟದ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸಾಹಿತ್ಯೋತ್ಸವ

Published 9 ಫೆಬ್ರುವರಿ 2024, 4:36 IST
Last Updated 9 ಫೆಬ್ರುವರಿ 2024, 4:36 IST
ಅಕ್ಷರ ಗಾತ್ರ

ಭಟ್ಕಳ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್‌ನ ರಾಜ್ಯಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮ ಫೆ. 9, 10 ಹಾಗೂ 11 ರಂದು ಭಟ್ಕಳದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಘಟಕದ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಹೇಳಿದರು.

ಅವರು ಗುರುವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಪ್ರತಿಭಾವಂತ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ತುಂಬಲು ಎಸ್ಸೆಸ್ಸೆಫ್ ಯುನಿಟ್, ಸೆಕ್ಟರ್, ಡಿವಿಷನ್ ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಈಗಾಗಲೇ ಯಶಸ್ವಿಯಾಗಿ ನಡೆಸಿದ್ದು, ಅದರಲ್ಲಿ ಪ್ರಥಮ ಸ್ಥಾನ ಪಡೆದ 26 ಜಿಲ್ಲೆಗಳ ಪ್ರತಿಭೆಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಎಂಟು ವೇದಿಕೆಗಳಲ್ಲಿ 120 ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿದ್ದು ರಾಜ್ಯದ ವಿವಿಧ ಕಡೆಗಳಿಂದ 1,500 ಪ್ರತಿಭೆಗಳು ಭಾಗವಹಿಸಲಿದ್ದಾರೆ’ ಎಂದರು.

ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಯ್ಯಿದ್ ಅಲವಿ ಅಲ್ ಬುಖಾರಿ ಕರ್ಕಿ ಹಾಗೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು. ಪ್ರಮುಖ ವಿದ್ವಾಂಸ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಘಟಕ ಅಧ್ಯಕ್ಷ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಈ ವರ್ಷದ ಸುನ್ನಿ ಸಾಹಿತ್ಯ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ ಎಂದರು.

ಸಯ್ಯಿದ್ ಅಲವಿ ಅಲ್ ಬುಖಾರಿ ಕರ್ಕಿ, ಮುಹಮ್ಮದ್ ಸಫ್ವ ನ್, ಕೆ.ಕೆ ಆಶ್ರಫ್, ಮುಜೀಬ್, ಮುನೀರ್ ಅಹ್ಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT