ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 | ಭಟ್ಕಳ: ಸಿದ್ಧಾರ್ಥ ಶಾಲೆ ಶೇ 100ರಷ್ಟು ಫಲಿತಾಂಶ

Published 9 ಮೇ 2024, 12:46 IST
Last Updated 9 ಮೇ 2024, 12:46 IST
ಅಕ್ಷರ ಗಾತ್ರ

ಭಟ್ಕಳ: ಶಿರಾಲಿಯ ಸಿದ್ಧಾರ್ಥ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಾಗಿದೆ.

ವಿದ್ಯಾರ್ಥಿಗಳಾದ ಐಶ್ವರ್ಯ ಗಣಪತಿ ನಾಯ್ಕ ಮತ್ತು ಮಾನ್ಯ ಸತೀಶ್ ನಾಯ್ಕ ಶೇ 96.64 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ನಿನಾದ್ ರಾಜೇಶ್ ನಾಯ್ಕ ಶೇ 95.52 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಧನ್ಯಶ್ರೀ ಹೊನ್ನಪ್ಪ ನಾಯ್ಕ ಶೇ 95.04 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

9 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ ಹಾಗೂ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಕಾರ್ಯದರ್ಶಿಗಳು, ಮುಖ್ಯೊಪಾಧ್ಯಾಯರು ಮತ್ತು ಸಹ-ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT