ಶಿರಸಿ: ‘ಶಿಕ್ಷಕರು ಗುಣಾತ್ಮಕ ಸಂಸ್ಕಾರದ ಪಠ್ಯದ ಜತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಾಧ್ಯವಾಗಲಿದೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ 20ನೇ ವಾರ್ಷಿಕ ಸ್ನೇಹ ಸಮ್ಮೇಳನ, ಕದಂಬ ಪತ್ರಿಕೆ ಬಿಡುಗಡೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ವ್ಯಕ್ತ ಪಡಿಸಸಬೇಕು. ವಿದ್ಯಾರ್ಥಿಗಳು ಜೀವನದಲ್ಲಿ ಶ್ರಮವಹಿಸಿದರೆ ಮಾತ್ರ ಪ್ರತಿಫಲ ದೊರೆಯುತ್ತದೆ. ಅದಕ್ಕಾಗಿ ಕಷ್ಟಪಟ್ಟು ಶಿಕ್ಷಣದ ಕಡೆಗೆ ಹೆಚ್ಚು ಒತ್ತು ನೀಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.

‘ಬನವಾಸಿಯ ಪದವಿಪೂರ್ವ ಕಾಲೇಜ್ನಲ್ಲಿ ಮುಂದಿನ ದಿನಗಳಲ್ಲಿ ಸಂಗೀತ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಣ ಆರಂಭಿಸಿ, ಸಂಗೀತ ಶಿಕ್ಷಕರನ್ನು ನೇಮಿಸಿ, ಶಿಕ್ಷಣಕ್ಕೆ ಬೇಕಾಗುವ ವ್ಯವಸ್ಥೆ ಕಲ್ಪಿಸಿಕೊಡುತ್ತೇನೆ’ ಎಂದು ಭರವಸೆ ನೀಡಿದರು.

ಈ ವೇಳೆ ಅಭಿವೃದ್ಧಿ ಸಮಿತಿ ವತಿಯಿಂದ 2024–25ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾಲೇಜ್ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಿದ್ದಲಿಂಗಣ್ಣ ಉಗ್ರಾಣದ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ದಿನೇಶ್ ಕೆ., ಅಭಿವೃದ್ಧಿ ಸಮಿತಿಯ ಸದಸ್ಯರಾದ ಪ್ರಕಾಶ ಬಂಗ್ಲೆ, ಶಂಕರ ಗೌಡ, ಪೂರ್ಣಿಮಾ ಪಿಳ್ಳೈ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೀಬಿ ಆಯಿಷಾ, ಉಪಾಧ್ಯಕ್ಷ ಸಿದ್ದವೀರೇಶ ನರೇಗಲ್, ಸದಸ್ಯರಾದ ರಹಮತ್ ಬಶೀರ್ ಅಹಮದ್, ನಾಗರಾಜ ಉಪ್ಪಾರ, ತುಳಸಿ ಆರೇರ, ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಗಣಪತಿ ನಾಯ್ಕ, ಪ್ರಶಾಂತ ಗೌಡ, ರವಿ ನಾಯ್ಕ, ಶಿವಾಜಿ ಕಾಳೇರಮನೆ, ಅರವಿಂದ, ವಿನಯ ಗೌಡ, ರೂಪಾ ನಾಯ್ಕ, ಶ್ರೀಲತಾ ಕಾಳೇರಮನೆ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಭಾವತಿ ಹೆಗಡೆ ನಿರೂಪಿಸಿದರು. ಶೋಭ ಮೊಗೇರ ಸ್ವಾಗತಿಸಿದರು. ರಾಜೇಶ ಡೊಳ್ಳೇಶ್ವರ ವರದಿ ವಾಚಿಸಿದರು. ಸಿದ್ದಪ್ಪ ಎಂ.ಕೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.