ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾವರ | ಎಲ್.ಪಿ.ಜಿ ಟ್ಯಾಂಕರ್‌ ಪಲ್ಟಿ; ಸಂಚಾರ ವ್ಯತ್ಯಯ

Published 24 ಮೇ 2023, 5:21 IST
Last Updated 24 ಮೇ 2023, 5:21 IST
ಅಕ್ಷರ ಗಾತ್ರ

ಹೊನ್ನಾವರ: ಭಟ್ಕಳ ಕಡೆಯಿಂದ ಪಟ್ಟಣದ ಶರಾವತಿ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗುತ್ತಿದ್ದ ಎಲ್.ಪಿ.ಜಿ.ಟ್ಯಾಂಕರ್ ಮಂಗಳವಾರ ಮಧ್ಯಾಹ್ನ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಯಿತು.

ಎದುರಿನ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಯಿತು ಎನ್ನಲಾಗಿದೆ.

ಟ್ಯಾಂಕರ್ ಚಾಲಕ ಗಾಯಗೊಂಡಿದ್ದಾರೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾದರೆ ಉಂಟಾಗಬಹುದಾದ ಅಪಾಯ ಎದುರಿಸಲು ಮುಂಜಾಗೃತಾ ಕ್ರಮವಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿತ್ತು. ಟ್ಯಾಂಕರ್ ತೆರವುಗೊಳಿಸುವಾಗ ಈ ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಕಲ್ಪಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT