ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರವಾರ: ಜಿಲ್ಲೆಯ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಪ್ರಶಸ್ತಿ

Published : 4 ಸೆಪ್ಟೆಂಬರ್ 2024, 14:07 IST
Last Updated : 4 ಸೆಪ್ಟೆಂಬರ್ 2024, 14:07 IST
ಫಾಲೋ ಮಾಡಿ
Comments

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಲಾಗಿದೆ.

ಕಾರವಾರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಕುಮಟಾ ತಾಲ್ಲೂಕಿನ ಹಿರೇಗುತ್ತಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ, ಭಟ್ಕಳ ತಾಲ್ಲೂಕು ಬೆಳಕೆ ಹೊನ್ನೆಮಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಾಘವೇಂದ್ರ ಎಸ್.ಮಡಿವಾಳ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಮುಂಡಗೋಡ ತಾಲ್ಲೂಕಿನ ಜೋಗೇಶ್ವರ ಹಳ್ಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಮಚಂದ್ರ ಶೇಷಾಜಪ್ಪಾ ಕಲಾಲ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಹಾದೇವ ಗೌಡ ಗಣಿತ ವಿಜ್ಞಾನ ಮಾದರಿಗಳನ್ನು ತಯಾರಿಸುವಲ್ಲಿ ಹೆಸರು ಮಾಡಿದ್ದಾರೆ. ರಾಘವೇಂದ್ರ ಅವರು ರಸ್ತೆ, ವಿದ್ಯುತ್ ಇಲ್ಲದ ಕುಗ್ರಾಮದ ಶಾಲೆಯಲ್ಲಿ ಎಂಟು ವರ್ಷ ಶಿಕ್ಷಕರಾಗಿ ಕೆಲಸ ಮಾಡಿ, ಕುಗ್ರಾಮದ ಮಕ್ಕಳ ಪ್ರತಿಭೆ ಗುರುತಿಸಿ ಅವರನ್ನು ಸಾಧನೆಯತ್ತ ದಾಪುಗಾಲಿಡುವಂತೆ ಮಾಡಿದ್ದಾರೆ. ರಾಮಚಂದ್ರ ಕಲಾಲ ಅವರು ಪ್ರಸಿದ್ಧ  ಜಲ ವರ್ಣ ಚಿತ್ರ ಕಲಾವಿದರಾಗಿದ್ದು, ಚಿತ್ರಕಲೆಯನ್ನು ತಮ್ಮ ಶಿಕ್ಷಕ ವೃತ್ತಿಯಲ್ಲೂ ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸರಳವಾಗಿ ಕಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂವರಿಗೂ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿರಲಿದೆ.

ರಾಘವೇಂದ್ರ ಮಡಿವಾಳ
ರಾಘವೇಂದ್ರ ಮಡಿವಾಳ
ರಾಮಚಂದ್ರ ಕಲಾಲ
ರಾಮಚಂದ್ರ ಕಲಾಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT