ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ಕೋಟಿ ವೆಚ್ಚದ ಗುರುಭವನ ನಿರ್ಮಾಣ: ಸಚಿವ ಮಂಕಾಳ ವೈದ್ಯ

Published 5 ಸೆಪ್ಟೆಂಬರ್ 2023, 12:25 IST
Last Updated 5 ಸೆಪ್ಟೆಂಬರ್ 2023, 12:25 IST
ಅಕ್ಷರ ಗಾತ್ರ

ಭಟ್ಕಳ: ‘ಭಟ್ಕಳದಲ್ಲಿ ಗುರುಭವನ ನಿರ್ಮಿಸಲು ಈ ಹಿಂದೆ ಶಾಸಕನಾಗಿದ್ದ 10 ಗುಂಟೆ ಜಾಗ ಮಂಜೂರು ಮಾಡಿಸಿದ್ದೆ, ಈಗ ₹5 ಕೋಟಿ ವೆಚ್ಚದಲ್ಲಿ ರಾಜದಲ್ಲೇ ಉತ್ತಮ ಮತ್ತು ಸುಸಜ್ಜಿತ ಗುರುಭವನವನ್ನು ಒಂದು ವರ್ಷದಲ್ಲಿ ನಿರ್ಮಿಸಿಕೊಡುವ ಗುರಿ ಹೊಂದಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಅವರು ಮುರುಡೇಶ್ವರದ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಲಾದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ‘ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಾರೆ. ಶಿಕ್ಷಕರು ಮಕ್ಕಳಿಗೆ ಜ್ಞಾನ ಮತ್ತು ಸಂಸ್ಕೃತಿ ಧಾರೆಯೆರೆದು ಉತ್ತಮ ಪ್ರಜೆಗಳನ್ನಾಗಿ ಮಾಡುತ್ತಿದ್ದಾರೆ.  ಇಂಗ್ಲಿಷ್ ವ್ಯಾಮೋಹದಿಂದ ಪಾಲಕರು ಮಕ್ಕಳನ್ನು ಇಂಗ್ಲಿಷ್ ಮಾಧ್ಯಮಕ್ಕೆ ಕಳುಹಿಸುತ್ತಿದ್ದಾರೆ. ಆದರೆ ನಮ್ಮ ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಚಂದ್ರಯಾನ - 3 ಉಡಾವನೆ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಟ್ಕಳದ ಅರ್ಬನ್ ಬ್ಯಾಂಕ್, ಸಾಲಗದ್ದೆ ಸ್ಪೋರ್ಟ್ಸ್ ಕ್ಲಬ್, ರಂಜನ್ ಇಂಡೇನ್ ಎಜೆನ್ಸಿ ಹಾಗೂ ದಿ. ಕೆ ವಿ ಪ್ರಭು ಸ್ಮರಣಾರ್ಥ ಕೊಡುಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮಾವಳ್ಳಿ-2 ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗರತ್ನ ಪಡಿಯಾ, ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಭಟ್ಕಳ ಅರ್ಬನ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಸಂತ ಶಾಸ್ತ್ರಿ, ಕುಮಟಾದ ಡಯಟ್ ಅಧಿಕಾರಿ ಎಂ.ಜಿ. ನಾಯ್ಕ, ಮಾವಳ್ಳಿ-1 ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಯನಾ ನಾಗೇಶ ನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಂತ ಗಾಂವಕರ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಸುಧೀರ ನಾಯ್ಕ ಇತರರು ಇದ್ದರು.

ಶಿಕ್ಷಕಿಯರ ರೈತ ಗೀತೆ ಮತ್ತು ಜಾನಪದ ಹಾಡು ಎಲ್ಲರ ಗಮನ ಸೆಳೆಯಿತು. ಭಟ್ಕಳ ಸೇರಿದಂತೆ ಕಾರವಾರ ಶೈಕ್ಷಣಿಕ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸಚಿವ ಮಂಕಾಳ ವೈದ್ಯ ಸನ್ಮಾನಿಸಿದ ದೃಶ್ಯ
ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸಚಿವ ಮಂಕಾಳ ವೈದ್ಯ ಸನ್ಮಾನಿಸಿದ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT