ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೂಗುಸೇತುವೆಯಲ್ಲಿ ಕಾರು ಚಲಾಯಿಸಿದ ಆರೋಪಿ ಪತ್ತೆ

Last Updated 2 ನವೆಂಬರ್ 2022, 20:45 IST
ಅಕ್ಷರ ಗಾತ್ರ

ಕಾರವಾರ: ಯಲ್ಲಾಪುರ ತಾಲ್ಲೂಕಿನ ಶಿವಪುರ ತೂಗುಸೇತುವೆಯ ಮೇಲೆ ಕಾರು ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ, ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಚಾಲಕ, ಜೊಯಿಡಾ ತಾಲ್ಲೂಕಿನ ಉಳವಿ ನಿವಾಸಿ ಮುಜಾಹಿದ್ ಆಜಾದ್ ಸೈಯದ್‌ (26) ಆರೋಪಿ.

ತೂಗು ಸೇತುವೆಯಲ್ಲಿ ಅ.31ರಂದು ಕಾರು ಚಲಾಯಿಸಿದ ಫೋಟೊಗಳು ಮತ್ತು ವಿಡಿಯೊಗಳು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಈ ಬಗ್ಗೆ ಉಳವಿ
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಅರ್ಜುನ ಮೊಕಾಶಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT