ಗೋಕರ್ಣ: ಇಲ್ಲಿಯ ಬಂಗ್ಲೆಗುಡ್ಡೆಯ ನಿವಾಸಿ ಚಂದ್ರಿ ಮಹಾಬಲೇಶ್ವರ ಗೌಡರ ಮನೆಗೆ ಭಾನುವಾರ ಬೆಳಿಗ್ಗೆ ನುಗ್ಗಿದ ಕಳ್ಳರು ಸುಮಾರು ₹1.15 ಲಕ್ಷ ಮೌಲ್ಯದ 26 ಗ್ರಾಂ ಬಂಗಾರದ ಆಭರಣ ಮತ್ತು ₹4 ಸಾವಿರ ನಗದನ್ನು ಕದ್ದೊಯ್ದಿದ್ದು, ದೂರು ದಾಖಲಾಗಿದೆ.
ಚಂದ್ರಿ ಗೌಡ ಕೂಲಿ ಕೆಲಸಕ್ಕೆ ಹೋದಾಗ ಮನೆಯ ಚಾವಣಿಯ ಹಂಚು ತೆಗೆದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಚಿನ್ನದ ಆಭರಣ ಮತ್ತು ನಗದು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.