ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರಿನ ವಿಷಯದಲ್ಲಿ ರಾಜಕೀಯವಿಲ್ಲ: ಭೀಮಣ್ಣ ನಾಯ್ಕ

Published 24 ಜನವರಿ 2024, 13:50 IST
Last Updated 24 ಜನವರಿ 2024, 13:50 IST
ಅಕ್ಷರ ಗಾತ್ರ

ಶಿರಸಿ: ಬಡವರಿಗೆ ನೀಡುವ ಸೂರಿನ ವಿಷಯದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ತಾಲ್ಲೂಕಿನ ಇಟಗುಳಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ವಸತಿ ಯೋಜನೆಯಡಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ರಾಜಕೀಯ ಎನ್ನುವುದು ಚುನಾವಣೆ ಪೂರ್ವದಲ್ಲಿ, ಗೆದ್ದು ಬಂದ ಮೇಲೆ ಎಲ್ಲಾ ಪಕ್ಷದವರೂ ನಮ್ಮವರೆಂದು ತಿಳಿದು ಅಭಿವೃದ್ಧಿ ಕೆಲಸ ಮಾಡಬೇಕು. ಇದೇ ನಿಜವಾದ ರಾಜಕೀಯ ಎಂದರು.

ಮನೆ ಮಂಜೂರಾದವರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಜವಾಬ್ದಾರಿಯಿಂದ ಕೆಲಸ ಮಾಡಿ ಕೊಡಬೇಕು. ಮನೆ ಕಟ್ಟಲು ಸರ್ಕಾರದಿಂದ ನೀಡಲಾಗುವ ಹಣ ಅಲ್ಪವಾದರೂ ತಾವೂ ಕೂಡಿಟ್ಟ ಹಣದಲ್ಲಿ ಸುಭದ್ರವಾದ ಮನೆಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿಯವರು ಫಲಾನುಭವಿಗಳಿಗೆ ಸಹಕಾರ ನೀಡಬೇಕು ಎಂದರು. 

ಈ ವೇಳೆ ಇಟಗುಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ನಾಯ್ಕ, ಉಪಾಧ್ಯಕ್ಷೆ ಶ್ರೀಕಲಾ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT