ಹೊನ್ನಾವರ: ‘ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಯೋಜನೆಯ ಪ್ರಸ್ತಾವ ಸರ್ಕಾರದ ಮುಂದಿಲ್ಲ’ ಎಂದು ಸಚಿವ ಮಂಕಾಳ ಎಸ್.ವೈದ್ಯ ಸ್ಪಷ್ಟಪಡಿಸಿದರು.

ಇಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಕೆಪಿಸಿ ಅಧಿಕಾರಿಗಳಿಂದ ಯೋಜನೆಯ ಕುರಿತು ಮಾಹಿತಿ ಪಡೆದು ಅವರು ಮಾತನಾಡಿದರು.

‘ನೀರು ಪೂರೈಕೆ ಯೋಜನೆಯ ಪ್ರಸ್ತಾವ ಸರ್ಕಾರದ ಮುಂದಿಲ್ಲದಿದ್ದರೂ ಕೆಲವರು ಪ್ರತಿಭಟನೆ ಸಂಘಟಿಸಿ ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಶರಾವತಿ ಭೂಗತ ವಿದ್ಯುತ್ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಪ್ರಸ್ತುತ ಯೋಜನೆಯಿಂದ ಜನರಿಗೆ ಅಥವಾ ಪರಿಸರಕ್ಕೆ ತೊಂದರೆ ಇಲ್’ ಎಂದು ಹೇಳುವ ಮೂಲಕ ವಿದ್ಯುತ್ ಯೋಜನೆಗೆ ಪರೋಕ್ಷ ಬೆಂಬಲ ಸೂಚಿಸಿದರು.

‘ಹೊನ್ನಾವರ ಹಾಗೂ ಮಂಕಿಯಲ್ಲಿ ನಮ್ಮ ಕ್ಲಿನಿಕ್ ಕಟ್ಟಡಗಳನ್ನು ಸ್ವಂತ ಜಾಗದಲ್ಲಿ ನಿರ್ಮಿಸಬೇಕು. ಎಂಡೋಸಲ್ಫಾನ್ ಪೀಡಿತರಿಗೆ ಸರ್ಕಾರದ ಸೌಲಭ್ಯ ತ್ವರಿತವಾಗಿ ಸಿಗಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಾಗುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕು’ ಎಂದರು.

‘ಹಡಿನಬಾಳ ರೈತ ಸಂಪರ್ಕ ಕೇಂದ್ರಕ್ಕೆ ಹಾಗೂ ತಾಲ್ಲೂಕಿನ ಅಂಗನವಾಡಿಗಳಿಗೆ ಕಟ್ಟಡ ಕಟ್ಟಲು ಸ್ವಂತ ಜಾಗ ನೀಡಬೇಕು. ತಾಲ್ಲೂಕು ಪಂಚಾಯಿತಿ ಹಳೇ ಕಟ್ಟಡದ ಜಾಗದಲ್ಲಿ ಪಶು ಆಸ್ಪತ್ರೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಮಾವಿನಕುರ್ವ ವಾಟರ್ ಪಾರ್ಕ್ಗೆ ಅಗತ್ಯ ಪ್ರಮಾಣದ ನೀರು ಪೂರೈಕೆ ಮಾಡಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಚೇತನಕುಮಾರ, ಆಡಳಿತಾಧಿಕಾರಿ ಶಿವರಾಮ, ತಹಶೀಲ್ದಾರ್ ಪ್ರವೀಣ ಕರಾಂಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.