ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ | ತಂಬಾಕು ಉತ್ಪನ್ನ ಮಾರಾಟ: ₹ 2800 ದಂಡ

Published 28 ಮೇ 2024, 14:27 IST
Last Updated 28 ಮೇ 2024, 14:27 IST
ಅಕ್ಷರ ಗಾತ್ರ

ಯಲ್ಲಾಪುರ: ತಂಬಾಕು ಉತ್ಪನ್ನಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಅಂಗಡಿಗಳ ಮೇಲೆ ತಾಲ್ಲೂಕು ತಂಬಾಕು ತನಿಖಾದಳ ಮಂಗಳವಾರ ದಾಳಿ ನಡೆಸಿ, ₹ 2800 ದಂಡ ವಿಧಿಸಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡಲು ಅವಕಾಶ ನೀಡಬಾರದು. ಬಿಡಿಬಿಡಿಯಾಗಿ ಸಿಗರೇಟ್, ಬೀಡಿ ಮಾರಾಟ ಮಾಡಬಾರದು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸಬಾರದು ಈ ಮೊದಲಾದ ವಿಷಯಗಳನ್ನು ಅಂಗಡಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ತಂಬಾಕು ಉತ್ಪನ್ನ ಮಾರಾಟ ಮಾಡಲು ಪರವಾನಗಿ ಪಡೆದಿರಬೇಕು ಎಂದು ತಿಳಿಸಲಾಯಿತು.

ತಹಶೀಲ್ದಾರ್‌ ತನುಜಾ ಸವದತ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರೆಂದ್ರ ಪವಾರ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT