ಮುಂಡಗೋಡ: ಜಿಂಕೆ ಮಾಂಸವನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯಕಾತೂರ ವಲಯದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬಆರೋಪಿಗೆ ಹುಡುಕಾಟ ನಡೆಸಲಾಗಿದೆ.

ಚಿಗಳ್ಳಿ ಗ್ರಾಮದ ಮಂಜುನಾಥ ನಾಳೆಕರ್, ಶಿಂಗನಳ್ಳಿಯ ಭರಮಗೌಡ ಪಾಟೀಲ ಬಂಧಿತರು ಎಂದು ಕಾತೂರ ಆರ್‌ಎಫ್‌ಒ ಅಜಯ ನಾಯ್ಕ ತಿಳಿಸಿದ್ದಾರೆ.ಕಾತೂರದಿಂದ ಮುಡಸಾಲಿಗೆ ಹೋಗುವ ಮಾರ್ಗದಲ್ಲಿ ಜಿಂಕೆ ಮಾಂಸವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ದಾಳಿ ಮಾಡಿದರು. ಆರೋಪಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಡಿಸಿಎಫ್ ಆರ್.ಜಿ.ಭಟ್ಟ ಮಾರ್ಗದರ್ಶನದಲ್ಲಿ ಎಸಿಎಫ್ ಜಿ.ಆರ್.ಶಶಿಧರ್ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.