ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಯಿಡಾ | ಬೈಕ್ ಅಪಘಾತ: ಇಬ್ಬರು ಸಾವು

Published 9 ಮೇ 2024, 14:08 IST
Last Updated 9 ಮೇ 2024, 14:08 IST
ಅಕ್ಷರ ಗಾತ್ರ

ಜೊಯಿಡಾ: ತಾಲ್ಲೂಕಿನ ಜಗಲಪೇಟ -ರಾಮನಗರ ರಸ್ತೆಯ ತಿಂಬೋಲಿ ಕ್ರಾಸ್ ಬಳಿ ಗುರುವಾರ ಮಧ್ಯಾಹ್ನ ದ್ವಿಚಕ್ರ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬ ಯುವಕನನ್ನು ಬೆಳಗಾವಿ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.

ರಾಮನಗರದ ಕರಣ ನಂಬಿಯಾರ (27) ಮತ್ತು ಜಗಲಬೇಟನ ಮಂಜುನಾಥ ಪರೇಕರ (29) ಮೃತರು.

ಇಬ್ಬರು ಯುವಕರು ಜಗಲಬೇಟದಿಂದ ರಾಮನಗರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ತಿಂಬೋಲಿ ಕ್ರಾಸ್ ಬಳಿ ತಲುಪಿದ ಬಳಿಕ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT