ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭದ್ರತೆ ಇದ್ದೋರು ಬೇರೆಯವ್ರನ್ನ ಕರೀತಾರೆ: ಡಿಕೆಶಿಗೆ ಸುನೀಲಕುಮಾರ್ ತಿರುಗೇಟು

Last Updated 31 ಮಾರ್ಚ್ 2023, 9:39 IST
ಅಕ್ಷರ ಗಾತ್ರ

ಶಿರಸಿ: ಅಭದ್ರತೆ ಇದ್ದೋರು ಮಾತ್ರ ಬೇರೆಯವರನ್ನು ಕರೆಯುತ್ತಾರೆ. ಆದರೆ ಭದ್ರತೆ ಇರೋರು ಬೇರೆಯವರನ್ನು ಕರೆಯುವುದಿಲ್ಲ ಎಂದು‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ, ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.

ಅವರು ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಡಿಕೆ ಶಿವಕುಮಾರ್ ಅವರು ಬಿಜೆಪಿ ಶಾಸಕರನ್ನು ಕಾಂಗ್ರೆಸ್ ‌ನತ್ತ ಸೆಳೆಯುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಅಭದ್ರತೆ ಕಾಣುತ್ತಿದೆ. ಅದಕ್ಕೆ ಬೇರೆಯವರನ್ನು ಕರೆಯುತ್ತಿದ್ದಾರೆ ಹೇಳಿದರು.

ಕಾಂಗ್ರೆಸ್ ನಾಯಕರು, ಶಾಸಕರು ಬೇರೆ ಬೇರೆ ಕಡೆ ಅಲೆದಾಡುತ್ತಿದ್ದಾರೆ. ಅವರ ಕ್ಷೇತ್ರದ ಹುಡುಕಾಟ‌ ನಡೆಸುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಅಭದ್ರತೆ, ಅಸ್ತಿತ್ವಕ್ಕಾಗಿ ಹೋರಾಟ ಎಲ್ಲವೂ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತಿದೆ ಎಂದು ಹೇಳಿದರು. ನಾವು ಖುಷಿಯಿಂದ ರಾಜ್ಯಾದ್ಯಂತ ಸಂಕಲ್ಪ ಯಾತ್ರೆಯನ್ನು ಮುಗಿಸಿದ್ದೇವೆ. ಅದರ ವಿಜಯ ಚುನಾವಣೆಯಲ್ಲೂ ಕಾಣಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿ‌ನ ದಿನಗಳಲ್ಲಿ ಸಂಪೂರ್ಣ ಬಹು ಮತದದೊಂದಿಗೆ ಸರ್ಕಾರ ರಚನೆಗೆ ಚಿಂತನೆ ನಡೆಸಲಿದ್ದೇವೆ ಎಂದು ಹೇಳಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT