ಸಿದ್ದಾಪುರ: ‘ವಿಶ್ವ ಪರಂಪರೆಯ ಸಂರಕ್ಷಣೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸುವಂತೆ ಯುನೆಸ್ಕೊ ಸಂಸ್ಥೆಯು ಕೇಂದ್ರ ಸರ್ಕಾರಕ್ಕೆ ನೀಡಿದ ಮಾರ್ಗದರ್ಶನ ಅಘನಾಶಿನಿ ನದಿ ಜೋಡಣೆ ಹೋರಾಟಕ್ಕೆ ಬಲ ಬಂದಿದೆ’ ಎಂದು ಜಿ.ಪಂ ಮಾಜಿ ಸದಸ್ಯ ಎನ್.ವಿ. ಹೆಗಡೆ ಮುತ್ತಿಗೆ ಹೇಳಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಪಟ್ಟಣದ ರಾಘವೇಂದ್ರ ಮಠದಲ್ಲಿ ಶುಕ್ರವಾರ ಜರುಗಿದ ಅಘನಾಶಿನಿ ನದಿ ಜೋಡಣೆ ವಿರೋಧಿ ಸಭೆಯಲ್ಲಿ ಮಾತನಾಡಿದರು.

‘ಯಾವುದೇ ಅಭಿವೃದ್ಧಿ ಅಥವಾ ನದಿ ಜೋಡಣೆ ಯೋಜನೆಯು ವಿಶ್ವ ಪರಂಪರೆಯ ಸಂರಕ್ಷಣಾ ಚೌಕಟ್ಟುಗಳ ಅಡಿಯಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು ಮತ್ತು ಪರಿಸರ ಸಮತೋಲನಕ್ಕೆ ಹಾನಿ ಮಾಡಬಾರದು ಎಂದು ಯುನಿಸ್ಕೋ ಉತ್ತರಿಸಿದೆ. ಅಲ್ಲದೇ, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ಯುನಿಸ್ಕೊ ವಿಶ್ವ ಪರಂಪರೆಯ ಕೇಂದ್ರವು 1972 ರ ವಿಶ್ವ ಪರಂಪರೆಯ ಸಮಾವೇಶದ ಪ್ರಕಾರ, ಅಂತಹ ನೈಸರ್ಗಿಕ ಪರಂಪರೆಯ ರಕ್ಷಣೆ ಆಯಾ ದೇಶಗಳ ಜವಾಬ್ದಾರಿಯಾಗಿದೆ. ಇಂತಹ ಪರಿಸರ ಸೂಕ್ಷ್ಮ ವಲಯಗಳಲ್ಲಿನ ಯಾವುದೇ ಯೋಜನೆಯು ಸಂರಕ್ಷಣಾ ನಿಯಮಗಳು ಮತ್ತು ಸುಸ್ಥಿರ ಅಭ್ಯಾಸಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಯುನಿಸ್ಕೊ ಸಂಸ್ಥೆಯು ಪತ್ರದಲ್ಲಿ ಕೇಂದ್ರಕ್ಕೆ ವಾಗ್ದಂಡವನ್ನು ವಿಧಿಸಿದೆ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ’ ಎಂದರು.

ಯೋಜನೆಗಳ ಕುರಿತು ಎಂ.ಎಸ್. ನಾಯ್ಕ ನರಮುಂಡಗಿ, ಸಂಕೇತ ನಾಯ್ಕ ಹಲಗೇರಿ, ವಿದ್ಯಾ ನಾಯ್ಕ ಹಾರ್ಸಿಕಟ್ಟ, ರಾಜು ನಾಯ್ಕ ಕ್ಯಾದಗಿ, ದಿವಾಕರ್ ನಾಯ್ಕ ಬಾಳೆಜಡ್ಡಿ ಮಾತನಾಡಿದರು.

ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಟಿ. ನಾಯ್ಕ ಸ್ವಾಗತಿಸಿದರು.

ವೇದಾವತಿ ನದಿ ಜೋಡಣೆ ಯೋಜನೆ ವಿರೋಧಿಸಿ, ಯುನಿಸ್ಕೊ ವಿಶ್ವ ಪರಂಪರೆಯ ಕೇಂದ್ರಕ್ಕೆ ಆಕ್ಷೇಪ ಪತ್ರವನ್ನು ಸಲ್ಲಿಸಿ ಭಾರತ ಸರ್ಕಾರಕ್ಕೆ ನಿರ್ದೇಶನ ನೀಡಲು ಯಶಸ್ವಿಯಾದ ಹೋರಾಟಗಾರ ರವೀಂದ್ರ ನಾಯ್ಕ ಅವರಿಗೆ ಸಭೆಯಲ್ಲಿ ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-1326890435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.