ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರದಹೊಳೆ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭೇಟಿ

Published 1 ಜನವರಿ 2024, 14:23 IST
Last Updated 1 ಜನವರಿ 2024, 14:23 IST
ಅಕ್ಷರ ಗಾತ್ರ

ಭಟ್ಕಳ: ಕೇಂದ್ರ ಸರ್ಕಾರದ ಬಂದರು ಹಾಗೂ ಪ್ರವಾಸೊದ್ಯಮದ ರಾಜ್ಯ ಸಚಿವ ಶ್ರೀಪಾದ ನಾಯ್ಕ ಭಾನುವಾರ ಶಿರಾಲಿಯ ಶಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ಕಾಸ್ಕಾರ್ಡ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿದರ. ಶಾರದಹೊಳೆ ನಾಮಧಾರಿ ಸಮಾಜದ ಅಧ್ಯಕ್ಷ ಸುಬ್ರಾಯ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಅರುಣ ನಾಯ್ಕ, ಹಿರಿಯರಾದ ಸುಬ್ರಾಯ ಜೆ. ನಾಯ್ಕ ಕಾಯ್ಕಿಣಿ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣಾ ನಾಯ್ಕ, ಪ್ರಮುಖರಾದ ವೆಂಕಟೇಶ ನಾಯ್ಕ, ಜಮೀನ್ದಾರ್ ಕೃಷ್ಣಾ ನಾಯ್ಕ, ಎಂ.ಕೆ. ನಾಯ್ಕ, ಮುಕುಂದ ನಾಯ್ಕ, ಎಸ್.ಎಂ.ನಾಯ್ಕ, ಬಿಜೆಪಿ /////ಅಧ್ಯಕ್ಷ ಸುಬ್ರಾಯ ದೇವಾಡಿಗ, ಶ್ರೀನಿವಾಸ ನಾಯ್ಕ, ಭಾಸ್ಕರ ದೈಮನೆ ಸೇರಿದಂತೆ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.
.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT