ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಕ್ಷೇತ್ರಕ್ಕೆ ಹಗಡೆ ಕೊಡುಗೆ ಅಪಾರ: ಮೊಗೇರ

Published 11 ಡಿಸೆಂಬರ್ 2023, 13:26 IST
Last Updated 11 ಡಿಸೆಂಬರ್ 2023, 13:26 IST
ಅಕ್ಷರ ಗಾತ್ರ

ಭಟ್ಕಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹೆಬಳೆ ವಲಯ, ಪ್ರಗತಿಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ ಹೆಬಳೆ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಹೆಬಳೆ ಗಾಂಧಿ ನಗರದ ಗಣೇಶೋತ್ಸವ ಸಮುದಾಯದ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಧರ್ಮಸ್ಥಳಕ್ಕೂ ನಮಗೂ ಅವಿನಾಭಾವ ಸಂಬಂಧ ಇದೆ. ಯೋಜನೆಯಿಂದ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು, ಭಜನಾ ಕಾರ್ಯಕ್ರಮಗಳನ್ನು ನಡೆಸುವುದರಿಂದ ಧಾರ್ಮಿಕ ಭಾವನೆ ಜನರಲ್ಲಿ ಮೂಡಿದೆ. ಶಿಕ್ಷಣ ಕ್ಷೇತ್ರಕ್ಕೂ ಕೂಡಾ ಯೋಜನೆಯ ಕೊಡುಗೆ ಅಪಾರ ಎಂದರು.

ಭಗವಾನ್ ಸತ್ಯ ಸಾಯಿ ಸೇವಾ ಸಮಿತಿಯ ಭಾಸ್ಕರ ನಾಯ್ಕ ಧಾರ್ಮಿಕ ಉಪನ್ಯಾಸ ನೀಡಿ, ದೇವರನ್ನು ನಂಬಿ. ಆದರೆ, ದೇವರ ಹೆಸರಿನಲ್ಲಿ ಮೋಸ ಮಾಡುವವರನ್ನು ನಂಬಬೇಡಿ. ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣ ನೀಡಿ ಅವರನ್ನು ಮೂಡನಂಬಿಕೆಯಿಂದ ದೂರ ಇರಿಸಿ ಉತ್ತಮ ಸಂಸ್ಕಾರ ನೀಡಿ ಎಂದರು.

ವಿ.ಎಸ್.ಎಸ್.ಜಾಲಿ ಇದರ ನಿವೃತ್ತ ಪ್ರಧಾನ ವ್ಯವಸ್ಥಾಪಕ ಶಾಂತರಾಮ ನಾಯ್ಕ ಮಾತನಾಡಿದರು. ಹೆಬಳೆ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಮುಕುಂದ ಮೊಗೇರ, ಹೆಬಳೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮಾದೇವಿ ಮೋಗೇರ, ಮಾಜಿ ಅಧ್ಯಕ್ಷ ಪುಂಡಲೀಕ ಹೆಬಳೆ ಇದ್ದರು. ಒಕ್ಕೂಟಗಳ ನಿಕಟಪೂರ್ವ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ತಾಂಬೂಲ ನೀಡಿ ಒಕ್ಕೂಟದ ಅಧಿಕಾರಿ ಹಸ್ತಾಂತರಿಸಿದರು.

ಮುಂಜಾನೆಯಿಂದಲೇ ಆರಂಭವಾದ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಅರ್ಚಕ ಜನಾರ್ಧನ ಭಟ್ಟ ಅವರ ಪೌರೋಹಿತ್ಯದಲ್ಲಿ ನಡೆಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT