ಕಾರವಾರ: ‘ಅಪಾಯಕಾರಿ ಸ್ಥಿತಿಯಲ್ಲಿರುವ ಶಾಲೆ, ಅಂಗನವಾಡಿ, ಹಾಸ್ಟೆಲ್, ಸರ್ಕಾರಿ ಕಟ್ಟಡಗಳ ಜೊತೆಗೆ ಸೇತುವೆ ಮತ್ತು ಕಾಲುಸಂಕಗಳ ದೃಢತೆಯ ಬಗ್ಗೆ ವಾರದೊಳಗೆ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮುಂಗಾರು ಸಿದ್ಧತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನಡೆಸಲಾದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

‘ಶಿಥಿಲಗೊಂಡಿರುವ ಕಟ್ಟಡಗಳು ಬಳಕೆ ಆಗದಂತೆ ಎಚ್ಚರವಹಿಸಬೇಕು. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಯಲ್ಲಿನ ಸೇತುವೆಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಗ್ರಾಮೀಣ ಪ್ರದೇಶಗಳಲ್ಲಿನ ಕಾಲುಸಂಕಗಳು ಸದೃಢವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ದುರ್ಬಲವಾಗಿರುವ ಸೇತುವೆ, ಕಾಲುಸಂಕ ಬಳಸದಂತೆ ನಿರ್ಬಂಧ ಹೇರಬೇಕು’ ಎಂದೂ ಸೂಚನೆ ನೀಡಿದರು.

‘ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗುಡ್ಡ ಕುಸಿತ ಅವಘಡ ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಪಾಯಕಾರಿ ಸ್ಥಳಗಳ ಬಳಿ ಇರುವ ಗೂಡಂಗಡಿಗಳನ್ನು ತೆರವಗೊಳಿಸಬೇಕು. ಸಂಭವನೀಯ ಕುಸಿತ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಬೇಕು. ಪ್ರವಾಹ ಸ್ಥಿತಿ ಎದುರಾಗಬಹುದಾದ ಪ್ರದೇಶಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಸೂಕ್ತ ಜಾಗಗಳನ್ನು ಗುರುತಿಸಿ, ಅಗತ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸೂಚಿಸಿದರು.

‘ಹೆದ್ದಾರಿಯಲ್ಲಿನ ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ನೌಕಾನೆಲೆ ವ್ಯಾಪ್ತಿಯ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಈಗಾಗಲೇ ಕೈಗೊಂಡಿರುವ ಕಾಮಗಾರಿಯನ್ನು ಮುಕ್ತಾಯಗೊಳಿಸಬೇಕು. ಶಾಲೆ, ಅಂಗನವಾಡಿ, ಕಾಲೇಜುಗಳ ವ್ಯಾಪ್ತಿ ಸೇರಿದಂತೆ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ 1,750 ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು’ ಎಂದರು.

‘ಶಿರೂರಿನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಈ ತಿಂಗಳ ಅಂತ್ಯದಲ್ಲಿ ಮುಕ್ತಾಯ ಗೊಳಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ವಹಿಸಲಾಗುವುದು. ಅಪಾಯಕಾರಿ ಸ್ಥಳಗಳಲ್ಲಿ ನೋ ಪಾರ್ಕಿಂಗ್ ಝೋನ್ ರಚಿಸಲಾಗುವುದು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಕೆ.ಶಿವಕುಮಾರ್ ತಿಳಿಸಿದರು.

ಉಪವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಭಕ್ಷ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-1016709473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.