ಕಾರವಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆದಿದ್ದು, ಸಚಿವ ಸಂಪುಟ ಹೊಸದಾಗಿ ರಚನೆಯಾಗಲಿದೆ. ಈ ವೇಳೆ ಜಿಲ್ಲೆಯ ನಾಲ್ವರು ಶಾಸಕರ ಪೈಕಿ ಯಾರಿಗೆ ಸಚಿವ ಹುದ್ದೆ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದ್ದು, ಪಕ್ಷದಿಂದ ಜಿಲ್ಲೆಯ ನಾಲ್ವರು ಶಾಸಕರು ಆಯ್ಕೆ ಆಗಿದ್ದಾರೆ. ಅವರ ಪೈಕಿ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ 9ನೇ ಅವಧಿಗೆ, ಭಟ್ಕಳ ಶಾಸಕ ಮಂಕಾಳ ವೈದ್ಯ ಹಾಗೂ ಕಾರವಾರ ಶಾಸಕ ಸತೀಶ ಸೈಲ್ ಎರಡನೇ ಅವಧಿಗೆ ಆಯ್ಕೆ ಆಗಿದ್ದರೆ, ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೊದಲ ಅವಧಿಗೆ ಶಾಸಕರಾದವರು.

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮೂರು ವರ್ಷಗಳಿಂದ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಆಪ್ತರ ವಲಯದಲ್ಲಿ ಗುರುತಿಸಿಕೊಂಡಿರುವ ಅವರು ತಮ್ಮ ಸಚಿವ ಸ್ಥಾನ ಉಳಿಯಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಎಂಬುದಾಗಿ ವೈದ್ಯ ಅವರ ಸಮೀಪವರ್ತಿಗಳು ಹೇಳುತ್ತಾರೆ.

‘ರಾಜ್ಯದಲ್ಲಿನ ಹಿರಿಯ ಶಾಸಕರ ಪೈಕಿ ಆರ್.ವಿ.ದೇಶಪಾಂಡೆ ಮೊದಲಿಗರು. ಸಿದ್ದರಾಮಯ್ಯ ಸಚಿವ ಸಂಪುಟದಲ್ಲೇ ಅವರಿಗೆ ಅವಕಾಶ ಸಿಗಬೇಕಿತ್ತು. ಆದರೆ, ಆಗ ಡಿ.ಕೆ.ಶಿವಕುಮಾರ್ ಅವರ ಆಪ್ತರಿಗೆ ಹೆಚ್ಚು ಮಣೆ ಹಾಕಿದ್ದರಿಂದ ದೇಶಪಾಂಡೆ ಅವರಿಗೆ ಅವಕಾಶ ತಪ್ಪಿತ್ತು. ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಬೆಂಬಲಿಗ ಶಾಸಕರಿಗೆ ಹುದ್ದೆ ನೀಡಲು ಒತ್ತಡ ಹೆಚ್ಚಬಹುದು. ಆಗ ದೇಶಪಾಂಡೆ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು’ ಎನ್ನುತ್ತಾರೆ ದೇಶಪಾಂಡೆ ಅವರ ಆಪ್ತರೊಬ್ಬರು.

ಕಾರವಾರ ಶಾಸಕ ಸತೀಶ ಸೈಲ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಶನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್ಎಂಸಿಎ) ಹುದ್ದೆಯನ್ನು ನೀಡಲಾಗಿತ್ತು. ಸದ್ಯ ಅದೇ ಹುದ್ದೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ಅಲ್ಲದೇ, ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಅವರು ವಿಧಾನಸಭೆಯ ಅಧಿವೇಶನದಲ್ಲಿ ಪಾಲ್ಗೊಳ್ಳುವ ಅವಕಾಶ ಕಳೆದುಕೊಂಡಿದ್ದಾರೆ. ಹೀಗಾಗಿ, ಸಚಿವ ಸಂಪುಟ ಸೇರುವ ಸಾಧ್ಯತೆ ಕಡಿಮೆ.

ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಸಚಿವ ಹುದ್ದೆಯ ಆಕಾಂಕ್ಷಿ. ಆದರೆ, ಈಡಿಗ ನಾಮಧಾರಿ ಕೋಟಾದಡಿ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ, ಭೀಮಣ್ಣ ಅವರಿಗೆ ಸಚಿವ ಸ್ಥಾನದ ಬದಲು ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂಬುದಾಗಿ ಕಾಂಗ್ರೆಸ್ ಮುಖಂಡರೊಬ್ಬರು ವಿಶ್ಲೇಷಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-20-96176328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.