ಕಾರವಾರ: ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಣೆ ಹಾಗೂ ಗೋ ಹತ್ಯೆ ಪ್ರಕರಣಗಳನ್ನು ತಡೆಯಲು ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.

‘ಗೋ ಹತ್ಯೆ ನಿಷೇಧ ಮತ್ತು ಸಂರಕ್ಷಣಾ ವಿಧೇಯಕ 2020ರ ಅಡಿಯಲ್ಲಿ ಕಾನೂನುಬದ್ಧ ಕ್ರಮ ಜರುಗಿಸಿ ಗೋವಿನ ರಕ್ಷಣೆಗೆ ಆದ್ಯತೆ ನೀಡಬೇಕು. ಜಿಲ್ಲೆಯ ಎಲ್ಲಾ ಗಡಿಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಒಂದು ತಿಂಗಳ ಅವಧಿವರೆಗೆ ಜಿಲ್ಲೆಯಲ್ಲಿ ನಡೆಯುವ ಜಾನುವಾರು ಸಂತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಗೋ ರಕ್ಷಣೆಯ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಬೇಕು. ಕಾರವಾರ ತಾಲ್ಲೂಕಿನ ಕಡವಾಡ ಪ್ರದೇಶದಲ್ಲಿ ರಾತ್ರಿ ವೇಳೆ ವಿಶೇಷ ನಾಕಾಬಂದಿ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಸಂಘಟನೆಯು ಗೋವುಗಳ ರಕ್ಷಣೆಗೆ ಗೋ ರಕ್ಷಾ ಅಭಿಯಾನ ಹಮ್ಮಿಕೊಂಡಿದೆ. ಅಭಿಯಾನದ ಭಾಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಗೋ ಕಳ್ಳಸಾಗಣೆ ವಿರುದ್ಧ ಮಾಹಿತಿ ಸಂಗ್ರಹಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳಾದ ಎನ್.ಆರ್.ಮುಕ್ರಿ, ಸೂರಜ್ ಸುರೇಶ್ ನಾಯ್ಕ, ಸಂತೋಷ್ ನಾಯ್ಕ, ಶ್ರೀನಿವಾಸ ಗುನಗಿ, ಮನೋಜ್ ಬಾಂದೇಕರ್, ಬಜರಂಗದಳದ ಅಮಿತ್ ಮಾಳ್ಸೇಕರ್, ಸಾಯಿಕಿರಣ್ ನಾಗೇಕರ್, ಓಂಕಾರ ಅಂಕೋಲೆಕರ್, ಅಮಿತ್ ಕಾಮತ್, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-20-140022101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.