ಶಿರಸಿ: ‘ಕಚೇರಿಯ ಕಡತಗಳು ಹಾಗೂ ದಿನನಿತ್ಯದ ಆಡಳಿತಾತ್ಮಕ ದಾಖಲೆಗಳು ಅಪೂರ್ಣವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಎಚ್ಚರಿಕೆ ನೀಡಿದರು.

ಮಂಗಳವಾರ ಶಿರಸಿ ತಾಲ್ಲೂಕಿನ ವಿವಿಧ ಕಚೇರಿಗಳು ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿಯನ್ನು ಹತ್ತಿರದಿಂದ ಗಮನಿಸಿದರು. ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅವರು ಇದೇ ವೇಳೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲ್ಲೂಕಿನ ಯಡಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಸಿಇಒ, ಪಂಚಾಯಿತಿ ಕಚೇರಿಯ ಕಡತಗಳು, ಸಿಬ್ಬಂದಿ ಹಾಜರಾತಿ ಮತ್ತು ದಿನನಿತ್ಯದ ಆಡಳಿತಾತ್ಮಕ ದಾಖಲೆಗಳನ್ನು ತಪಾಸಣೆ ನಡೆಸಿದರು. ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕ ಸೇವೆಗಳು ವಿಳಂಬವಿಲ್ಲದೆ ದೊರೆಯಬೇಕು. ಕಚೇರಿಯ ಯಾವುದೇ ದಾಖಲೆಗಳು ಅಪೂರ್ಣವಾಗಿರಬಾರದು, ಸಕಾಲದಲ್ಲಿ ಎಲ್ಲ ದಾಖಲಾತಿಗಳನ್ನು ನವೀಕರಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ಸೂಚಿಸಿದರು.

ನಂತರ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ವಚ್ಛ ಸಂಕೀರ್ಣ ಘಟಕದಡಿ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣೆ (ಎಂಆರ್ಎಫ್) ಘಟಕದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಯ ಗುಣಮಟ್ಟ ವೀಕ್ಷಿಸಿದ ಅವರು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಂಜಿನಿಯರ್ಗಳು ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಕಚೇರಿಯ ಪ್ರಮುಖ ದಾಖಲಾತಿಗಳಾದ ಸಿಬ್ಬಂದಿ ಹಾಜರಾತಿ ಪುಸ್ತಕ, ಚಲನ-ವಲನ ದಾಖಲಾತಿ ಹಾಗೂ ಸರ್ಕಾರಿ ವಾಹನಗಳ ಲಾಗ್ ಬುಕ್ಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಕಚೇರಿಗೆ ಬರುವ ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ವಿಳಂಬ ಧೋರಣೆ ಅನುಸರಿಸಬಾರದು ಎಂದು ಎಚ್ಚರಿಸಿದ ಅವರು, ಪ್ರತಿಯೊಂದು ಕಡತ ಹಾಗೂ ದಾಖಲೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ನಿಯಮಾನುಸಾರ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಿರಸಿ ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಸಂಬಂಧಪಟ್ಟ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-2000432584

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.