ಶಿರಸಿ: ‘ಉತ್ತರ ಕನ್ನಡ ಜಿಲ್ಲೆಯ ಪರಿಸರಕ್ಕೆ ಮಾರಕವಾದ ಶರಾವತಿ ಪಂಪ್ಡ್ ಸ್ಟೋರೇಜ್ ಮತ್ತು ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಜನರ ಕಣ್ಣಿಗೆ ಮಣ್ಣೆರಚುವ ದ್ವಂದ್ವ ರಾಜಕಾರಣ ಮಾಡುತ್ತಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಜಿಲ್ಲೆಯ ಜನರ ಮುಂದೆ ಈ ಯೋಜನೆಗಳಿಗೆ ವಿರೋಧವಿದೆ ಎಂದು ನಾಟಕವಾಡುವ ಕಾಂಗ್ರೆಸ್ ನಾಯಕರು, ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿಯಾದಾಗ ಈ ಯೋಜನೆಗಳನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸಲು ಪಟ್ಟು ಹಿಡಿದಿರುವುದು ಅವರ ಇಬ್ಬಂದಿ ನೀತಿಯನ್ನು ಬಯಲು ಮಾಡಿದೆ. ಮಗುವನ್ನು ಚಿವುಟುವವರೂ ಇವರೇ, ತೊಟ್ಟಿಲು ತೂಗುವವರೂ ಇವರೇ ಎನ್ನುವಂತೆ ರಾಜ್ಯ ಸರ್ಕಾರವು ಜಿಲ್ಲೆಯ ಹಿತಾಸಕ್ತಿಗೆ ದ್ರೋಹ ಬಗೆಯುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಗಳು ಬಾಲಿಷವಾಗಿವೆ. ಹತಾಶೆಯಿಂದ ಕಾಂಗ್ರೆಸ್ ಇಂತಹ ಸುಳ್ಳು ಅಪಪ್ರಚಾರ ಮಾಡುತ್ತಿದೆ’ ಎಂದು ತಿಳಿಸಿರುವ ಅವರು, ‘ಜಿಲ್ಲೆಯ ನೈಸರ್ಗಿಕ ಸಂಪತ್ತನ್ನು ನಾಶಮಾಡುವ ಯೋಜನೆಗಳ ವಿರುದ್ಧ ಹೋರಾಡಲು ಬಿಜೆಪಿ ಸದಾ ಸಿದ್ಧವಿದೆ. ಅಭಿವೃದ್ಧಿಯ ಹೆಸರಿನಲ್ಲಿ ಜಿಲ್ಲೆಯ ಸರ್ವನಾಶಕ್ಕೆ ಮುಂದಾಗಿರುವ ಸರ್ಕಾರಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-20-617243385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.