ಶಿರಸಿ: ‘ಉತ್ತರ ಕನ್ನಡ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಲಕಾಲಕ್ಕೆ ಸಭೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಹಲವೆಡೆ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಒದಗಿಸಬೇಕಾದ ಮತ್ತು ಇತರ ಸಹಕಾರ ನೀಡಬೇಕಾದ ರಾಜ್ಯ ಸರ್ಕಾರ ಈ ಕುರಿತು ಏನು ಮಾಡುತ್ತಿದೆ ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಒಮ್ಮೆ ಪರಿಶೀಲಿಸುವ ಅಗತ್ಯವಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್ ತಿರುಗೇಟು ನೀಡಿದ್ದಾರೆ.

‘ಜಿಲ್ಲೆಯಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದರೂ ಬಗೆಹರಿಸದ ಸಂಸದ ಕಾಗೇರಿ ಅವರು ಸೀಬರ್ಡ್ ನಿರಾಶ್ರಿತರಿಗೆ ಚೆಕ್ ವಿತರಣೆ ವೇಳೆ ಫೋಟೊ ತೆಗೆಯಿಸಿಕೊಳ್ಳಲು ಬರುತ್ತಾರೆ’ ಎಂಬ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಹೇಳಿಕೆಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಅವರು, ‘ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿ ಜಿಲ್ಲಾಡಳಿತಕ್ಕೆ ಜಮಾ ಮಾಡಿ ಮೂರು ತಿಂಗಳ ನಂತರ ಚೆಕ್ ವಿತರಣಾ ಕಾರ್ಯಕ್ರಮ ಮಾಡಿದರೂ ನಿರಾಶ್ರಿತರಿಗೆ ಅದನ್ನು ತಿಂಗಳುಗಟ್ಟಲೆ ತಲುಪಿಸುವಲ್ಲಿ ವಿಫಲವಾದ ಕಾರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ವಿಮರ್ಶೆ ಮಾಡಿಕೊಳ್ಳಲಿ’ ಎಂದರು.

‘ಆ ಕಾರ್ಯಕ್ರಮದಲ್ಲಿ ತಾವು ಫೋಟೊದಲ್ಲಿ ಇದ್ದೀರಿ ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯದಿಂದ ಅಭಿವೃದ್ಧಿಗೆ ಬಿಡಿಗಾಸು ನೀಡದೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಾ ಎಲ್ಲವನ್ನು ನಾವೇ ಮಾಡಿದ್ದೇವೆ ಎನ್ನುತ್ತಿರುವ ಕಾಂಗ್ರೆಸ್ಸಿಗರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ಮತ್ತು ಧೋರಣೆ ಜನರು ಒಪ್ಪುವುದಿಲ್ಲ’ ಎಂದಿದ್ದಾರೆ.

‘ಭೂಕುಸಿತ ತಡೆಗೆ ಹಣ ನೀಡುತ್ತೇವೆ ಎಂದಿರುವ ರಾಜ್ಯ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ?, ಇದರ ಕುರಿತು ಏನು ಕ್ರಮ ಕೈಗೊಂಡಿದೆ? ಎಂಬುದನ್ನು ಜನರಿಗೆ ತಿಳಿಸಲಿ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇದುವರೆಗೂ ಜನರಿಗೆ ಪರಿಹಾರ ನೀಡಿ ಭೂಮಿಯನ್ನು ಪಡೆದು ಯೋಜನೆ ಆರಂಭಿಸಲು ಆಗದ ಬಗ್ಗೆ ಉಸ್ತುವಾರಿ ಸಚಿವರು ಮಾತನಾಡಬೇಕು’ ಎಂದು ಹೇಳಿದರು.

‘ಕಳಚೆ ಭಾಗದ ಭೂಕುಸಿತ ಪ್ರದೇಶಕ್ಕೆ ಹಿಂದಿನ ಬಿಜೆಪಿ ಸರ್ಕಾರ ಅನುದಾನವನ್ನು ಇಟ್ಟರೂ ಇಂದಿಗೂ ಯಾವುದೇ ಹಣ ಬಿಡುಗಡೆ ಮಾಡದೇ, ಇದು ಆಗದ ಕಷ್ಟದ ಕೆಲಸ ಎನ್ನುತ್ತಿರುವ ಉಸ್ತುವಾರಿ ಸಚಿವರ ಮಾತುಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಜಿಲ್ಲೆಯಲ್ಲಿ ನಿರ್ಮಾಣವಾಗಬೇಕಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆರೋಗ್ಯ ಅಧಿಕಾರಿಗಳ ವರ್ಗಾವಣೆ ವಿಚಾರಗಳ ಕುರಿತು ರಾಜ್ಯ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎನ್ನುವುದನ್ನು ಮಂಕಾಳ ವೈದ್ಯರು ಗಮನಿಸಲಿ’ ಎಂದರು.

‘ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾಂಗ್ರೆಸ್ ಸರ್ಕಾರ ಎರಡು ವರ್ಷದ ಅವಧಿಯಲ್ಲಿ ಏನು ಮಾಡಿದೆ ಎಂಬುದನ್ನು ಜನರಿಗೆ ವಿವರಿಸಲಿ’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.