ಕಾರವಾರ: ‘ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಗುಡ್ಡ ಕುಸಿತ ಉಂಟಾ ಬಹುದಾದ ಸಂಭವನೀಯ ಸ್ಥಳಗಳ ಸಮೀಪದ ಅಂಗಡಿಗಳನ್ನು ಸ್ಥಳಾಂ ತರಿಸುವ ಜೊತೆಗೆ ಮುಂಗಾರು ಮುಗಿ ಯುವವರೆಗೆ ಅಂತಹ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದರು.

‘ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗುವ ಮತ್ತು ಗುಡ್ಡ ಕುಸಿತ ಉಂಟಾಗಬಹುದಾದ ಪ್ರದೇಶಗಳ ಪಟ್ಟಿ ಮಾಡಲಾಗಿದೆ. ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಿಳಂಬ ಮಾಡದೆ ಕೈಗೊಳ್ಳಬೇಕು’ ಎಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದರು.

‘ಗುಡ್ಡ ಕುಸಿಯುವ ಪ್ರದೇಶಗಳ ಸಮೀಪ, ರಾಷ್ಟ್ರೀಯ ಹೆದ್ದಾರಿ ಅಂಚಿ ನಲ್ಲಿ ಜನರಿಗೆ ಎಚ್ಚರಿಸುವ ಸೂಚನೆ ಫಲಕಗಳನ್ನು ಅಳವಡಿಸಬೇಕು. ವಾಹನ ಗಳು ನಿಲುಗಡೆಯಾಗದಂತೆ ಎಚ್ಚರಿಸಲು ಬ್ಯಾರಿಕೇಡ್ ಅಳವಡಿಸಬೇಕು’ ಎಂದರು.

‘ಮಳೆಗಾಲದ ಅವಧಿಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಈಗಿನಿಂದಲೇ ಎಲ್ಲಾ ಇಲಾಖೆಗಳು ಸನ್ನದ್ದರಾಗಿರಬೇಕು. ಕಾರವಾರದಲ್ಲಿ ನೌಕಾನೆಲೆಯ ಸಮೀಪದ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ, ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಕೈಗೊಂಡಿರುವ ಕುರಿತು ಸಂಪೂರ್ಣ ವರದಿಯನ್ನು ನೀಡಬೇಕು’ ಎಂದರು.

‘ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಫಲವಾಗಿರುವ ಕೊಳವೆ ಬಾವಿಗಳು ಮತ್ತು ಉಪಯೋಗವಿಲ್ಲದ ತೆರೆದ ಬಾವಿಗಳನ್ನು ಮುಚ್ಚಬೇಕು. ವಿದ್ಯುತ್ ವ್ಯತ್ಯಯದ ಕುರಿತು ಹೆಚ್ಚಿನ ದೂರುಗಳು ಬರುತ್ತಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.

‘ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಸ್ಥಳಗಳಲ್ಲಿ ಈಗಾಗಲೆ ತರಬೇತಿ ಪಡೆದುಕೊಂಡಿರುವ ಸ್ಪಾಟರ್ಗಳನ್ನು ನಿಯೋಜಿಸಲು ಪಟ್ಟಿ ಸಿದ್ಧಪಡಿಸಿ. ಶಾಲೆ, ಅಂಗನವಾಡಿ ಸಮೀಪದ ಅಪಾಯಕಾರಿ ಮರ, ವಿದ್ಯುತ್ ಕಂಬ ಸ್ಥಳಾಂತರಿಸಿ’ ಎಂದರು. ಜಿ.ಪಂ. ಸಿಇಒ ಡಾ.ದಿಲೀಷ್ ಶಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಇತರ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-1293912302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.