ಶಿರಸಿ: ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಳಾಗಿರುವ ಶೇ 50ರಷ್ಟು ಮಳೆಮಾಪನ ಕೇಂದ್ರಗಳ ದುರಸ್ತಿಗಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. ಮಳೆಮಾಪನ ಕೇಂದ್ರಗಳ ಸಮಸ್ಯೆಯಿಂದ ರೈತರಿಗೆ ಯಾವುದೇ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸ್ಪಷ್ಟಪಡಿಸಿದರು.

ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಳೆಮಾಪನ ಕೇಂದ್ರಗಳ ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆದಿದ್ದು, ರೈತರ ಪರವಾಗಿ ನಾವು ಸದಾ ಇದ್ದೇವೆ’ ಎಂದು ಭರವಸೆ ನೀಡಿದರು.

ಜಿಲ್ಲೆಯನ್ನು ಮಂಗಳೂರು ಹೈಕೋರ್ಟ್ ವ್ಯಾಪ್ತಿಗೆ ಸೇರಿಸುವ ಸರ್ವೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಉತ್ತರ ಕನ್ನಡ ಜಿಲ್ಲೆಯು ಪ್ರಸ್ತುತ ಧಾರವಾಡ ಹೈಕೋರ್ಟ್ ವ್ಯಾಪ್ತಿಯಲ್ಲಿದೆ. ಭೌಗೋಳಿಕವಾಗಿ ವಿಶಾಲವಾಗಿರುವ ನಮ್ಮ ಜಿಲ್ಲೆಯ ಕರಾವಳಿ ತಾಲ್ಲೂಕುಗಳನ್ನು ಮಂಗಳೂರು ವ್ಯಾಪ್ತಿಗೂ ಹಾಗೂ ಘಟ್ಟದ ಮೇಲಿನ ತಾಲ್ಲೂಕುಗಳನ್ನು ಧಾರವಾಡ ವ್ಯಾಪ್ತಿಯಲ್ಲೇ ಉಳಿಸಿದರೆ ನಮ್ಮ ಅಭ್ಯಂತರವಿಲ್ಲ. ಆದರೆ, ಇಡೀ ಜಿಲ್ಲೆಯನ್ನು ಮಂಗಳೂರಿಗೆ ಸೇರಿಸಿದರೆ ಶಿರಸಿ, ಸಿದ್ದಾಪುರ, ಯಲ್ಲಾಪುರ ಸೇರಿದಂತೆ ಘಟ್ಟದ ಮೇಲಿನ ಭಾಗದ ಜನರಿಗೆ ತೀವ್ರ ಸಮಸ್ಯೆಯಾಗುತ್ತದೆ. ಸದ್ಯ ಇರುವ ಸ್ಥಿತಿಯಲ್ಲೇ ಮುಂದುವರಿಸುವುದು ಅಥವಾ ಯಾರಿಗೂ ತೊಂದರೆಯಾಗದಂತೆ ವಿಭಾಗ ಮಾಡುವುದು ಒಳಿತು’ ಎಂದರು.

‘ಪಕ್ಷದಲ್ಲಿ ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕುರ್ಚಿ ಬಿಟ್ಟುಕೊಡಲು ಸಿದ್ಧವಿರುವುದಾಗಿ ಹೇಳಿದ್ದಾರೆ. ನಮ್ಮಲ್ಲಿ ಮುಖ್ಯಮಂತ್ರಿ ಅಥವಾ ಮಂತ್ರಿಗಳನ್ನು ಬದಲಾಯಿಸುವವರು ಯಾರೂ ಇಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಉತ್ತರ ಕನ್ನಡಕ್ಕೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ಗೆ ವಿನಂತಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-20-1258893698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.