ಶಿರಸಿ: ಬೆಟ್ಟದ ಪಹಣಿಯಲ್ಲಿ ಬ ಖರಾಬು ನಮೂದು ರದ್ದತಿಗೆ ಆಗ್ರಹ ಹಾಗೂ ಸಾವಯವ ಕೃಷಿ ಕಾಲೇಜು ಸ್ಥಾಪನೆ ಸೇರಿದಂತೆ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಸ್ವರ್ಣವಲ್ಲಿಯಲ್ಲಿ ಆಯೋಜಿಸಿದ್ದ 18ನೇ ಕೃಷಿ ಜಯಂತಿಯು ರೈತಪರ ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡಿತು.

ಗುರುವಾರ ಮಠದಲ್ಲಿ ನಡೆದ ಕೃಷಿ ಜಯಂತಿಯ ಸಮಾರೋಪ ಸಮಾರಂಭದಲ್ಲಿ ಬೆಟ್ಟದ ಪಹಣಿಯಲ್ಲಿ ಬ ಖರಾಬು ಎಂದು ನಮೂದಿಸಿರುವುದನ್ನು ಕಂದಾಯ ಇಲಾಖೆ ಕೂಡಲೇ ಕೈಬಿಡಬೇಕು. ಈ ಬಗ್ಗೆ ಸಂಸದರು ಮತ್ತು ಶಾಸಕರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು. ಅಡಿಕೆ ತೋಟಗಳಲ್ಲಿ ಉಪಬೆಳೆಗಳಾಗಿ ಬೆಳೆಯಲು ಕಾಳುಮೆಣಸು, ಕಾಫಿ ಹಾಗೂ ಯಾಲಕ್ಕಿ ಸಸಿಗಳನ್ನು ತೋಟಗಾರಿಕಾ ಇಲಾಖೆಯು ರಿಯಾಯಿತಿ ದರದಲ್ಲಿ ರೈತರಿಗೆ ಒದಗಿಸಬೇಕು. ಮಠದ ಪಕ್ಕದಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ 100 ಎಕರೆ ಫಾರ್ಮ್ನಲ್ಲಿ ವಿಶೇಷವಾಗಿ ಸಾವಯವ ಕೃಷಿ ಕಾಲೇಜು ಆರಂಭಿಸಲು ಸರ್ಕಾರ ಕ್ರಮ ವಹಿಸಬೇಕು. ಅಡುಗೆ ಅನಿಲದ ಕೊರತೆಯಾಗದಂತೆ ತಡೆಯಲು ಪ್ರತಿ ರೈತ ಕುಟುಂಬಕ್ಕೂ ಗೋಬರ್ ಗ್ಯಾಸ್ ಘಟಕ ಹೊಂದಲು ಪ್ರೋತ್ಸಾಹ ನೀಡಬೇಕು. ಬೆಟ್ಟ ಭೂಮಿಯಲ್ಲಿ ರೈತರು ವಾಸ್ತವ್ಯದ ಮನೆ ನಿರ್ಮಿಸಿಕೊಳ್ಳಲು ಕನಿಷ್ಠ 5 ಗುಂಟೆ ಜಾಗವನ್ನು ಜಿಲ್ಲಾಧಿಕಾರಿ ಅಥವಾ ಉಪವಿಭಾಗಾಧಿಕಾರಿಗಳು ಮಂಜೂರು ಮಾಡಬೇಕು ಎಂಬ ನಿರ್ಣಯಗಳನ್ನು ಮಂಡಿಸಿ, ಸಂಸದರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು ಈ ನಿರ್ಣಯಗಳ ಜಾರಿಗೆ ಆಗ್ರಹಿಸಿ ಸರ್ಕಾರಕ್ಕೆ ಗಡುವು ನೀಡಿದರು.

ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಮಾತನಾಡಿ, ‘ಬೆಟ್ಟ ಭೂಮಿಯ ಹಕ್ಕನ್ನು ಉಳಿಸಿಕೊಳ್ಳಲು ಸಂಘಟಿತ ಹೋರಾಟ ಅನಿವಾರ್ಯ’ ಎಂದು ಎಚ್ಚರಿಸಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಬೆಟ್ಟ ಬ ಖರಾಬು ಆದೇಶ ಹಿಂತೆಗೆದುಕೊಳ್ಳುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು. ಟಿ.ಎಸ್.ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಅಡಿಕೆ ಎಲೆಚುಕ್ಕೆ ರೋಗ ಸಂಶೋಧನೆ ಹಾಗೂ ಬೊರ್ಡೋ ದ್ರಾವಣಕ್ಕೆ ಸಹಾಯಧನ ನೀಡುವಂತೆ ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ, ಕೇಂದ್ರ ಸಾಂಬಾರು ಮಂಡಳಿ ನಿರ್ದೇಶಕ ಪ್ರಸನ್ನ ಕೆರೇಕೈ ಇದ್ದರು. ಆರ್.ಎನ್.ಹೆಗಡೆ ಉಳ್ಳಿಕೊಪ್ಪ ಸ್ವಾಗತಿಸಿದರು. ಡಾ.ಜಿ.ವಿ.ಹೆಗಡೆ ನಿರ್ಣಯ ಮಂಡಿಸಿದರು. ಸುರೇಶ ಹಕ್ಕಿಮನೆ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-20-199081107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.