ಕಾರವಾರ: ‘ಸುಪ್ರಿಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಆ. 21, 22 ಮತ್ತು 23ರಂದು ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಜಿಲ್ಲೆಯ 34 ಪ್ರಕರಣಗಳು ಈ ಸಂದರ್ಭದಲ್ಲಿ ಬಗೆಹರಿಯಲು ಅವಕಾಶವಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ತಿಳಿಸಿದ್ದಾರೆ.

‘17 ಕೌಟುಂಬಿಕ, 9 ಸಿವಿಲ್, ಮೋಟಾರು ವಾಹನ ಅಪಘಾತ ಪರಿಹಾರ ಮತ್ತು ತೆರಿಗೆಗೆ ಸಂಬಂಧಿಸಿದ ತಲಾ 2, ಭೂ ಸ್ವಾಧೀನ, ಕಾರ್ಮಿಕ ವಿವಾದ, ಚೆಕ್ ಅಮಾನ್ಯ, ಸೇವೆಗೆ ಸಂಬಂಧಿಸಿದ ತಲಾ 1 ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-20-646954545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.