ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರ ಹುದ್ದೆಗೆ ತಾವು ನಿಯಮಾನುಸಾರ ನಾಮಪತ್ರ ಸಲ್ಲಿಸಿದ್ದರೂ, ಸೂಚನಾ ಪತ್ರಕ್ಕೆ ಸಹಿ ಮಾಡಿಲ್ಲ ಎಂದು ನೆಪವೊಡ್ಡಿ ನಾಮಪತ್ರವನ್ನು ಷಡ್ಯಂತ್ರದಿಂದ ತಿರಸ್ಕರಿಸಲಾಗಿದೆ ಎಂದು ಶಿಕ್ಷಕ ಜಗದೀಶ ನಾಯಕ ಆರೋಪಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಯಾಗಿರುವ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಶಿವಾನಂದ ನಾಯಕ ಅವರು ಯಾವುದೇ ಸೂಚನಾ ಪತ್ರ ನೀಡದೇ, ಈಗ ಸೂಚನಾ ಪತ್ರಕ್ಕೆ ಸಹಿ ಮಾಡಿಲ್ಲವೆಂದು ತಪ್ಪು ಮಾಹಿತಿ ನೀಡಿ ನಾಮಪತ್ರ ತಿರಸ್ಕರಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಹಿಂದಿನ ಸಂಘದ ಅವ್ಯವಹಾರದಲ್ಲಿನ ಲೋಪದೋಷ ಮರೆಮಾಚಲು ಕುತಂತ್ರ ಮಾಡಿದ್ದಾರೆ. ಈಗಾಗಲೇ ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠದಲ್ಲಿ ಪ್ರಕರಣ ದಾಖಲಿಸಿದ್ದು, ಕರ್ನಾಟಕ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹದಳ, ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಸ್ಥರದ ಉನ್ನತಾಧಿಕಾರಿಗಳಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-20-1108740083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.