ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ | ಮಹಾಬಲೇಶ್ವರ ದೇವಸ್ಥಾನ ಪೂಜಾ ವಿವಾದ: ಮೇಲುಸ್ತುವಾರಿ ಸಮಿತಿ ಸಭೆ

Published 16 ಮೇ 2024, 13:41 IST
Last Updated 16 ಮೇ 2024, 13:41 IST
ಅಕ್ಷರ ಗಾತ್ರ

ಗೋಕರ್ಣ: ಇಲ್ಲಿಯ ಮಹಾಬಲೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನೇಮಿಸಿದ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಮೇಲುಸ್ತುವಾರಿ ಸಮಿತಿಯ ಸದಸ್ಯರ ಸಭೆ ಗುರುವಾರ ಮಹಾಬಲೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಸಭೆಯಲ್ಲಿ ಪೂಜಾ ವಿಷಯಕ್ಕೆ ಸಂಬಂಧ ಪಟ್ಟಂತೆ ನ್ಯಾಯಾಲಯದಲ್ಲಿ ಆದೇಶ ಪಡೆದವರ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು ಎನ್ನಲಾಗಿದೆ. ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಯಿತು ಎಂಬುದು ತಿಳಿದುಬಂದಿಲ್ಲ. ಈಗಾಗಲೇ ಕುಸಿದು ಬೀಳುವ ಹಂತದಲ್ಲಿರುವ ದಕ್ಷಿಣ ದ್ವಾರದ ಕಟ್ಟಡ ದುರಸ್ತಿ ಕಾರ್ಯ ಮಾಡಲು ತೀರ್ಮಾನಿಸಲಾಯಿತು ಎನ್ನಲಾಗಿದೆ. ಈ ಬಗ್ಗೆ ಪುರಾತತ್ವ ಇಲಾಖೆಯ ಅಧಿಕಾರಿಗಳೂ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಮಿತಿಯ ಸದಸ್ಯರಾದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಸಮಿತಿಯ ಕಾರ್ಯದರ್ಶಿ ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ಭಟ್ಕಳ ಡಿ.ಎಸ್.ಪಿ. ಮಹೇಶ ಎಂ.ಕೆ., ಉಪಾಧಿವಂತರಾದ ಮಹಾಬಲ ಉಪಾಧ್ಯ, ದತ್ತಾತ್ರೇಯ ಹಿರೇಗಂಗೆ, ವಿದ್ವಾಂಸರಾದ ಮುರಳೀಧರ ಪ್ರಭು, ಪರಮೇಶ್ವರ ಮಾರ್ಕಾಂಡೆ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT