ಹಳಿಯಾಳ: ‘ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಅತ್ಯವಶ್ಯಕವಾಗಿದ್ದು, ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿದೆ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಶುಕ್ರವಾರ ತಾಲ್ಲೂಕಿನ ಭಾಗವತಿ ಗ್ರಾಮದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ನಿಮಿತ್ತ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ನಡೆಸುತ್ತಿರುವ ಕಲಿಕಾ ಚಿಲುಮೆ, ಓದು ಕರ್ನಾಟಕ ಜ್ಞಾನ ಸೇತುವೆಯಂತಹ ಹಲವು ಕಾರ್ಯಕ್ರಮಗಳು ಮಕ್ಕಳ ಭವಿಷ್ಯವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನ ಬಿತ್ತುವ ಮೂಲಕ ಪ್ರತಿಯೊಬ್ಬ ಶಿಕ್ಷಕರು ಕಾರ್ಯಗತರಾಗಬೇಕು ಎಂದರು.

ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಪಠ್ಯಪುಸ್ತಕವನ್ನು ಶಾಸಕರು ವಿದ್ಯಾರ್ಥಿಗಳಿಗೆ ವಿತರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ, ಭಾಗವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು, ಮುಖ್ಯಶಿಕ್ಷಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಗುಲಾಬಿ ಹೂವು ನೀಡಿ ಸ್ವಾಗತ

ದಾಂಡೇಲಿ: ಪ್ರಸ್ತುತ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ತಾಲ್ಲೂಕಿನಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ ಸಡಗರದಿಂದ ಬರಮಾಡಿಕೊಳ್ಳಲಾಯಿತು.

ತಾಲ್ಲೂಕಿನ ಹರ್ನೋಡದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಪಂಚಾಯಿತಿ ಸದಸ್ಯ ಗೋಕುಲ ಮಿರಾಶಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕ ಪ್ರವೀಣ್ ನಾಯ್ಕ, ಸಹ ಶಿಕ್ಷಕಿ ಮಂಗಲಾ ನಾಯಕ , ಎಸ್ಡಿಎಂಸಿ ಅಧ್ಯಕ್ಷ ಬಾಬು ಮಲಗುಂಡೆ ಇದ್ದರು.

ದಾಂಡೇಲಿಯ ಸುಭಾಷ್ ನಗರದ ಶಾಲೆಯಲ್ಲಿ ನಗರಸಭೆ ಅಧ್ಯಕ್ಷ ಆಶ್ಫಾಕ್ ಶೇಖ ಮಕ್ಕಳಿಗೆ ಸಿಹಿ ನೀಡಿ ಸ್ವಾಗತಿಸಿದರು. ಹಳೇ ದಾಂಡೇಲಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕಿನ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಎಸ್.ಹಾದಿಮನಿ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದರು.

ಹಳೇ ದಾಂಡೇಲಿ ಸರ್ಕಾರಿ ಕನ್ನಡ ಪ್ರೌಢಶಾಲೆ 2025-26ನೇ ಸಾಲಿನ ದಾಖಲಾತಿ ಆಂದೋಲನ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಜಯಾ ನಾಯ್ಕ, ಕಲ್ಪನಾ ಪಾಟೀಲ, ಸುಭಾಷ್ ನಾಯ್ಕ, ಶ್ವೇತಾ ಹದಲಿ, ನಗರಸಭೆ ಸದಸ್ಯ ಸಪೂರ ಯರಗಟ್ಟಿ, ಮಂಜುನಾಥ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.