ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡಗೋಡ | 'ತಡವಾಗಿ ಬರುವ ಸಿಬ್ಬಂದಿ ವಿರುದ್ಧ ಕ್ರಮ'

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಎಚ್ಚರಿಕೆ
Published 16 ಮೇ 2024, 13:39 IST
Last Updated 16 ಮೇ 2024, 13:39 IST
ಅಕ್ಷರ ಗಾತ್ರ

ಮುಂಡಗೋಡ: ‘ತಾಲ್ಲೂಕಿನ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ರಜಾ ಅವಧಿಯಲ್ಲಿ ಅವರ ಊರಿಗೆ ಹೋಗಬಹುದು. ವಿವಿಧ ಇಲಾಖೆಗಳಿಗೆ ಬಯೊಮೆಟ್ರಿಕ್‌ ಪದ್ಧತಿ ಅಳವಡಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ತಡವಾಗಿ ಬರುವ ಹಾಗೂ ಕಚೇರಿ ಅವಧಿಗಿಂತ ಮುಂಚೆ ಮನೆಗೆ ಹೋಗುವ ಅಧಿಕಾರಿ, ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಹೇಳಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದರೂ, ಇನ್ನೂವರೆಗೂ ಯಾರೂ ಸಂದರ್ಶನಕ್ಕೆ ಬಂದಿಲ್ಲ. ಮತ್ತೊಮ್ಮೆ ವೈದ್ಯರ ನೇಮಕಕ್ಕೆ ಅರ್ಜಿ ಕರೆಯಲಾಗುವುದು. ಅರ್ಹತೆ ಇರುವ ವೈದ್ಯರು ಯಾರಾದರೂ ಬಂದರೇ, ಕೂಡಲೇ ನೇಮಕಾತಿ ಮಾಡಿಕೊಳ್ಳಲಾಗುವುದು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್‌, ತಾಲ್ಲೂಕು ಪಂಚಾಯಿತಿ ಇಒ ಟಿ.ವೈ. ದಾಸನಕೊಪ್ಪ, ಬಿಇಒ ಜಕಣಾಚಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT