ಎಸ್‌ಪಿಎಂ ರಸ್ತೆಯ ನಿವಾಸಿ ಶ್ರೀಧರ ದಿಲೀಪ ಪವಾರ(43) ಮೃತರು. ‘ಎಂದಿನಂತೆ ಶ್ರೀಧರ ವಾಯುವಿಹಾರಕ್ಕೆ ತೆರಳಿದ್ದರು. ಆಗ ವೇಗವಾಗಿ ಬಂದ ಬುಲೆರೊ ವಾಹನವು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು’ ಎಂದು ಸಂಚಾರ ದಕ್ಷಿಣ ಠಾಣೆ ಪೊಲೀಸರು ತಿಳಿಸಿದ್ದಾರೆ.