ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಟ್ಕಳ: ಸಂಭ್ರಮದ ವೈಕುಂಠ ಏಕಾದಶಿ

Published 23 ಡಿಸೆಂಬರ್ 2023, 14:07 IST
Last Updated 23 ಡಿಸೆಂಬರ್ 2023, 14:07 IST
ಅಕ್ಷರ ಗಾತ್ರ

ಭಟ್ಕಳ: ವೈಕುಂಠ ಏಕಾದಶಿ ಅಂಗವಾಗಿ ಪಟ್ಟಣದ ಆಸರಕೇರಿಯ ನಾಮಧಾರಿ ಗುರುಮಠದ ವೆಂಕಟರಮಣ ದೇವಸ್ಥಾನಕ್ಕೆ ಸಾವಿರಕ್ಕೂ ಅಧಿಕ ಭಕ್ತುರು ಭೇಟಿ ನೀಡಿ ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದು ಪುನೀತರಾದರು.

ಬೆಳಿಗ್ಗೆ 7 ಗಂಟೆಯಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಭಕ್ತರು ದೇವಸ್ಥಾನದ ಉತ್ತರದ ದ್ವಾರದ ಮೂಲಕ ದೇವಸ್ಥಾನದ ಒಳಗೆ ಪ್ರವೇಶಿಸಿ  ದೇವರ ದರ್ಶನ ಪಡೆದರು. ದೇವಸ್ಥಾನದಲ್ಲಿ ಉತ್ತರ ದ್ವಾರವನ್ನು ವಿಶೇಷವಾಗಿ ಹೂವಿನಿಂದ ಅಲಂಕರಿಸಲಾಗಿತ್ತು. ದೇವರ ಉತ್ಸವ ಮೂರ್ತಿಯನ್ನು ವೈಕುಂಠ ದ್ವಾರದಲ್ಲಿ ಉಯ್ಯಾಲೆಯಲ್ಲಿ ಆಸೀನಗೊಳಿಸಿ ವಿಶೇಷವಾಗಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಲಾಯಿತು.

ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಪಾನಕ ಹಾಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಭಜನೆಯ ನಂತರ ರಾತ್ರಿ 9 ಗಂಟೆಗೆ ಮಹಾಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT