ಕಾರವಾರ: ಪ್ರೇಮಿಗಳ ದಿನಾಚರಣೆ ನೆಪದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಿಸುತ್ತ ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಿಸುವ ಕೆಲಸ ಮಾಡುವವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಘಟಕದಿಂದ ಬುಧವಾರ ಉಪವಿಭಾಗಾಧಿಕಾರಿ ಆರ್.ಶ್ರವಣಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

‘ಫೆ.14ರಂದು ಜಿಲ್ಲೆಯ ಶಾಲೆ, ಕಾಲೇಜುಗಳು ಸಮೀಪ, ಉದ್ಯಾನ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಯುವತಿಯರು, ಮಹಿಳೆಯರ ಮೇಲೆ ನಡೆಯುವ ಕಿರುಕುಳ, ದೌರ್ಜನ್ಯ ತಡೆಯುವ ಜೊತೆಗೆ ಬೆದರಿಕೆಗಳು ಬರದಂತೆ ನಿಗಾ ಇರಿಸಬೇಕು. ಅತಿವೇಗದಲ್ಲಿ ವಾಹನ ಚಲಾಯಿಸುವ ಯುವಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಮಾದಕ ವಸ್ತು, ಮದ್ಯಪಾನ, ಅನೈತಿಕ ಪಾರ್ಟಿಗಳನ್ನು ಆಯೋಜಿಸುವವರ ವಿರುದ್ಧ ಕ್ರಮ ಜರುಗಿಸಬೇಕು. ಯುವಕರಿಗೆ ಭಾರತೀಯ ಸಂಸ್ಕೃತಿ, ನೈತಿಕ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ಪ್ರಮುಖರಾದ ಸಾಗರ ಕುರ್ಡೇಕರ, ಶಿವಾನಂದ ಗೌಡ, ಜಗದೀಶ ತಳೇಕರ, ಪ್ರಶಾಂತ ಪೆಡ್ನೇಕರ, ಚಂದ್ರಕಾಂತ ಹರಿಕಂತ್ರ, ಮೋಹನ್, ಚಂದ್ರಕಾಂತ ಉಳ್ವೇಕರ, ದೀಪಕ ನಾಯ್ಕ, ಗಣೇಶ ರಾಯ್ಕರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.