ಭಟ್ಕಳ: ಉತ್ತಮ ಮನಸ್ಸಿನಿಂದ ಮಾಡಿದ ಕಾರ್ಯ ಭಗವಂತನ ಕೃಪೆಗೆ ಕಾರಣವಾಗುತ್ತದೆ. ಅದನ್ನು ಸಮಾಜ ಗುರುತಿಸುತ್ತದೆ ಎಂದು ನಾಮಧಾರಿ ಸಮಾಜದ ಗುರುಮಠದ ಅಧ್ಯಕ್ಷ ಅರುಣ ನಾಯ್ಕ ಹೇಳಿದರು.

ಅವರು ಸೋಮವಾರ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ವರ್ಧಂತಿ ಉತ್ಸವದ ಅಂಗವಾಗಿ ದೇವಸ್ಥಾನದ ಆಡಳಿತ ಮಂಡಳಿ, ಶ್ರೀನಿವಾಸ ಕಲಾ ಮಿತ್ತ ಮಂಡಳಿ ಹಾಗೂ ಶ್ರೀ ವೆಂಕಟೇಶ್ವರ ನಾಮಧಾರಿ ಅಭಿವೃದ್ದಿ ಸಂಘ, ಆಸರಕೇರಿ ಅವರು ಜಂಟಿಯಾಗಿ ಹಮ್ಮಿಕೊಂಡ ಸಾಂಸ್ಕೃತಿಕ ವೇದಿಕೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಹಲವಾರು ವರ್ಷಗಳಿಂದ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಕ್ಕೆ ಯಾವುದೇ ಫಲಾಪೇಕ್ಷೆ ಇಲ್ಲದೇ ಅನೇಕರು ತೊಡಗಿಸಿಕೊಡಿದ್ದಾರೆ. ಅಂತವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ . ನಮ್ಮ ಹಿರಿಯರಾದ ದಿ.ಎಲ್.ಎಸ್. ನಾಯ್ಕ ಅವರು ದೇವಸ್ಥಾನದ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ನಮ್ಮೊಂದಿಗಿಲ್ಲದಿದ್ದರೂ ಇಂದಿಗೂ ಸಮಾಜದ ಅಂತಹ ಮಹಾನ್ ವ್ಯಕ್ತಿಗಳ ಕಾರ್ಯವನ್ನು ಸದಾ ನೆನೆಯುತ್ತದೆ ಎಂದರು.

ಶ್ರೀನಿವಾಸ ಕಲಾ ಮಿತ್ರ ಮಂಡಳಿ ಕಲಾವಿದ ಸುರೇಶ ನಾಯ್ಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶ್ರೀಧರ ನಾಯ್ಕ ಆಸರಕೇರಿ ಹಾಗೂ ಗುರುಮಠದ ವರ್ಧಂತಿ ಉತ್ಸವದಲ್ಲಿ ಚಪ್ಪರ ಹಾಕುವ ಕಾರ್ಯದಲ್ಲಿ ತೊಡಗಿಸಿಕೊಂಡ ಗೊರಟೆ ಭಾಗದ ಸುರೇಶ ನಾಯ್ಕ ನೇತೃತ್ವದ ತಂಡವನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಆಸಕೇರಿ ನಾಮಧಾರಿ ಅಭಿವೃದ್ದಿ ಸಂಘವು ಶಿಕ್ಷಣ, ಕ್ರೀಡಾ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸನ್ಮಾನಿಸಿದರು. ಕಾರ್ಯಕ್ರಮವನ್ನು ಅಣ್ಣಪ್ಪ ನಾಯ್ಕ ಹಾಗೂ ಪಾಂಡುರಂಗ ನಾಯ್ಕ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಬಹುಮಾನದ ಪ್ರಾಯೋಜಕತ್ವವನ್ನು ರಾಘವೇಂದ್ರ ಸಾಗರ, ಈಶ್ವರ ನಾಯ್ಕ, ಆಸರಕೇರಿ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.