ಶಿರಸಿ: ‘ಹಳ್ಳಿಯ ಪರಿಸರ, ಅಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸಿಗೆ ಮುದ ನೀಡುವ ಜತೆ ನೆಮ್ಮದಿಯ ಭಾವ ಹೊರಹೊಮ್ಮಲು ಸಹಾಯ ಮಾಡುತ್ತವೆ’ ಎಂದು ನಟ ಎಸ್. ದೊಡ್ಡಣ್ಣ ಹೇಳಿದರು.

ತಾಲ್ಲೂಕಿನ ಬೆಟ್ಟಕೊಪ್ಪದಲ್ಲಿ ಶನಿವಾರ ಸಂಜೆ ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕ ಆಯೋಜಿಸಿದ್ದ ‘ನಮ್ಮನೆ ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಬೆಂಗಳೂರಿನಂತಹ ಮಹಾನಗರಗಳು ಸಂಚಾರ ದಟ್ಟಣೆ, ವಾಯಮಾಲಿನ್ಯದ ಕಾರಣಗಳಿಂದ ನರಕವಾಗುತ್ತಿವೆ. ಅದರಿಂದ ಹೊರಬರಲು ಹಳ್ಳಿಗೆ ಬರಬೇಕು. ಹಳ್ಳಿಯ ವಾತಾವರಣದಲ್ಲೇ ನೆಮ್ಮದಿ ಲಭ್ಯ’ ಎಂದರು.

ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಮಾತನಾಡಿ, ‘ನಾವು ಮೊಬೈಲ್ ಎಂಬ ಚಕ್ರವ್ಯೂಹದಲ್ಲಿ ಸಿಲುಕಿದ್ದೇವೆ. ಅದಿಲ್ಲದೇ ಒಂದು ಕ್ಷಣವೂ ಬದುಕಿಲ್ಲ ಎನ್ನುವ ಸ್ಥಿತಿಗೆ ತಲುಪಿದ್ದೇವೆ. ಅಕ್ಕಪಕ್ಕ ಕುಳಿತರೂ ಮಾತಿಲ್ಲ ಕಥೆಯಿಲ್ಲ ಎನ್ನುವಂತಾಗಿದೆ. ಅದರಿಂದಾಗುವ ಹಿಂಸೆ ಅಷ್ಟಿಷ್ಟಲ್ಲ. ಮೊಬೈಲ್ನಿಂದ ದೂರವಾದರೆ ನಮ್ಮ ಇಡೀ ಸಮಾಜ, ದೇಶ ಬಹುತೇಕ ಸರಿ ಹೋಗುತ್ತದೆ’ ಎಂದರು.

ಇದೇ ವೇಳೆ ರಂಗಭೂಮಿ ಕಲಾವಿದೆ ಬಿ.ಜಯಶ್ರೀ, ಹುಬ್ಬಳ್ಳಿಯ ನಂದು ಕೆಮಿಕಲ್ಸ್ ಸಂಸ್ಥಾಪಕ ರಾಮನಂದನ ಹೆಗಡೆ ಅವರಿಗೆ ನಮ್ಮನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯುವ ಕಲಾವಿದ ತೇಜಸ್ವಿ ಗಾಂವಕರಗೆ ನಮ್ಮನೆ ಕಿಶೋರ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದ ಭಾಗವಾಗಿ ಯುವ ಕಲಾವಿದೆ ತುಳಸಿ ಹೆಗಡೆ ಅವರು ಗೋವಿನ ಮಹತ್ವ ಸಾರುವ ವಂದೇ ಗೋವಿಂದಮ್ ನೃತ್ಯ ರೂಪಕ ಪ್ರದರ್ಶಿಸಿದರು. ನಂತರ ವಿಶ್ವೇಶ್ವರ ಭಟ್ ಖರ್ವಾ ಗಾಯನ ಪ್ರಸ್ತುತಪಡಿಸಿದರು.

ಟ್ರಸ್ಟ್ ಅಧ್ಯಕ್ಷ ರವೀಂದ್ರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಘವೇಂದ್ರ ಬೆಟ್ಟಕೊಪ್ಪ ಸ್ವಾಗತಿಸಿದರು. ಚಿನ್ಮಯ ಕೆರೆಗದ್ದೆ ಪ್ರಾರ್ಥಿಸಿದರು. ನಾರಾಯಣ ಭಾಗ್ವತ ನಿರೂಪಿಸಿದರು. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಾಯತ್ರಿ ರಾಘವೇಂದ್ರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.