ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ವಿನಯಾ ಸ್ಮೃತಿ ಪ್ರಶಸ್ತಿ’ ಪ್ರದಾನ

Published 22 ಆಗಸ್ಟ್ 2024, 16:52 IST
Last Updated 22 ಆಗಸ್ಟ್ 2024, 16:52 IST
ಅಕ್ಷರ ಗಾತ್ರ

ಕುಮಟಾ: ‘ಪ್ರತಿಭಾನ್ವಿತ ಶಿಕ್ಷಕಿಯ ನೆನಪಿನಲ್ಲಿ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ, ಪ್ರತಿ ವರ್ಷ ಗೌರವಿಸುವ ಕಾರ್ಯಕ್ರಮದಿಂದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅನುಕೂಲವಾಗುತ್ತದೆ’ ಎಂದು ಸಾಹಿತಿ ಎನ್.ಆರ್. ಗಜು ಹೇಳಿದರು.

ಇಲ್ಲಿನ ಕೊಂಕಣ ಎಜ್ಯುಕೇಷನ್ ಟ್ರಸ್ಟ್ ಆಯೋಜಿಸಿದ್ದ ದಿ. ವಿನಯಾ ಶಾನಭಾಗ ಸ್ಮರಣಾರ್ಥ ‘ವಿನಯಾ ಸ್ಮೃತಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗಿಬ್ ಪ್ರೌಢಶಾಲೆ ಮುಖ್ಯಶಿಕ್ಷಕ ವಿನಾಯಕ ಶಾನಭಾಗ, ‘ಶಿಕ್ಷಕ ವೃತ್ತಿಯಲ್ಲಿ ತೊಡಗಿರುವವರಿಗೆ ಗೌರವ ಸಲ್ಲಿಸಲಾಗಿದೆ’ ಎಂದರು.

ಟ್ರಸ್ಟ್ ಅಧ್ಯಕ್ಷ ವಿ.ಆರ್. ನಾಯಕ ಅಧ್ಯಕ್ಷತೆ ವಹಿಸಿದ್ದರು. ಗಿಬ್ ಬಾಲಕಿಯರ ಪ್ರೌಢಶಾಲೆ ಮುಖ್ಯಶಿಕ್ಷಕಿ ಗೀತಾ ಪೈ, ಅನಂತ ಶಾನಭಾಗ, ಶೈಕ್ಷಣಿಕ ಸಲಹೆಗಾರ ಆರ್.ಎಚ್. ದೇಶಭಂಡಾರಿ, ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಚಾರ್ಯ ಕಿರಣ ಭಟ್ಟ, ಉಪನ್ಯಾಸಕ ಚಿದಾನಂದ ಭಂಡಾರಿ, ಮುಖ್ಯಶಿಕ್ಷಕರಾದ ಸಾವಿತ್ರಿ ಹೆಗಡೆ, ಸುಜಾತಾ ನಾಯ್ಕ, ಗಣೇಶ ಜೋಶಿ, ಸಾಹಿತಿ ಬೀರಣ್ಣ ನಾಯಕ, ಡಿ.ಡಿ. ಕಾಮತ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT