ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ | ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಕಾಗೇರಿ ಖಂಡನೆ

Published 4 ಸೆಪ್ಟೆಂಬರ್ 2023, 13:34 IST
Last Updated 4 ಸೆಪ್ಟೆಂಬರ್ 2023, 13:34 IST
ಅಕ್ಷರ ಗಾತ್ರ

ಶಿರಸಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಅಳಿಸಿ ಹಾಕಬೇಕು ಎಂದು ನೀಡಿರುವ ಪ್ರಚೋದನಾಕಾರಿ ಹೇಳಿಕೆಗೆ ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಖಂಡನೆ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸಚಿವರಾಗಿ ಸಂವಿಧಾನವನ್ನು ಎತ್ತಿ ಹಿಡಿಯುವ ಪ್ರಮಾಣ ವಚನ ಸ್ವೀಕರಿಸಿದ ಸ್ಟಾಲಿನ್ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯು ಪ್ರಚೋದನಾಕಾರಿ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಬಿತ್ತರಿಸುವ ನಡೆಯಾಗಿದೆ. ಸನಾತನ ಧರ್ಮವು ಕಾಲಾತೀತವಾಗಿದ್ದು, ಸಾವಿರಾರು ವರ್ಷಗಳ ಇತಿಹಾಸವಿದೆ. ಡಿಎಂಕೆ, ಇಂಡಿಯ ಮೈತ್ರಿ ಕೂಟದ ಪಾಲುದಾರರು. ಹೀಗಾಗಿ ಕಾಂಗ್ರೆಸ್ ಮತ್ತು ಇತರ ಮೈತ್ರಿಕೂಟದ ಪಕ್ಷಗಳು ಉದಯನಿಧಿ ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೊಡಬೇಕು’ ಎಂದಿದ್ದಾರೆ. 

‘ಇವರ ಹೇಳಿಕೆಯು ದೇಶದ ಇಡೀ ಸಮಾಜಕ್ಕೇ ಕಿಚ್ಚಿತ್ತುವ ಹೇಳಿಕೆಯಾಗಿದ್ದು ಇದನ್ನು ಮಿತ್ರ ಪಕ್ಷಗಳು ಅನುಮೋದಿಸುತ್ತಾರಾ ಎಂದು ಜನತೆಗೆ ತಿಳಿಸಬೇಕು. ಸ್ಟಾಲಿನ್ ಅವರು‌ ತಮ್ಮ ಹೊಣೆಗೇಡಿ ಹೇಳಿಕೆಗೆ ಇಡೀ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕೆಂದು’ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT