ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ, ರಕ್ಷಣೆಗೆ ಆದ್ಯತೆಯೇ ಗುರಿ: ಕುಮಾರ ಬಂಗಾರಪ್ಪ

Published 4 ಮೇ 2024, 14:13 IST
Last Updated 4 ಮೇ 2024, 14:13 IST
ಅಕ್ಷರ ಗಾತ್ರ

ಸಿದ್ದಾಪುರ: ದೇಶದ ಅಭಿವೃದ್ಧಿ ಮತ್ತು ರಕ್ಷಣೆಗೆ ಆದ್ಯತೆ ನೀಡುವ ಮೋದಿ ಸರ್ಕಾರವನ್ನು ಆಯ್ಕೆ ಮಾಡಲು ಹೊರಟಿದ್ದೇವೆಯೇ ವಿನಃ ಲೂಟಿ ಕೋರ, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಲ್ಲ ಎಂದು ಮಾಜಿ ಶಾಸಕ ಕುಮಾರ ಬಂಗಾರಪ್ಪ ಹೇಳಿದರು.

ಪಟ್ಟಣದ ಬಸವಣ್ಣ ದೇವಾಲಯದಿಂದ ರಾಜ ಮಾರ್ಗದ ಮೂಲಕ ರಾಮಕೃಷ್ಣ ಹೆಗಡೆ ವೃತ್ತದ ವರೆಗೆ   ಶನಿವಾರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಪ್ರಧಾನಿ ಅಭ್ಯರ್ಥಿಯನ್ನು ಇಂದಿನ ವರೆಗೂ ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಶಕ್ಕಾಗಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿ ಎಂದರು.

ಪ್ರಮುಖರಾದ ಬಿಜೆಪಿ ರಾಜ್ಯಕಾರ್ಯಕಾರಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್, ಜೆಡಿಎಸ್ ಪ್ರಮುಖ ಉಪೇಂದ್ರ ಪೈ, ತಾಲ್ಲೂಕು ಬಿಜೆಪಿ ಅಧ್ಯಕ್ಷ ತಿಮ್ಮಪ್ಪ ಎಂ.ಕೆ, ಪ್ರಸನ್ನ ಕೆಎಕೈ, ಎಸ್.ಕೆ.ಮೇಸ್ತಾ, ಅಣ್ಣಪ್ಪ ನಾಯ್ಕ, ತೋಟಪ್ಪ ನಾಯ್ಕ, ಸತೀಶ ಹೆಗಡೆ, ಅರ್ಜುನ ಕುಮಾರ, ಮಂಜುನಾಥ ಭಟ್ಟ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT