ಮೃತರನ್ನು ರೇಖಾ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಕಾರು ಅಂಕೋಲಾದಿಂದ ಯಲ್ಲಾಪುರದ ಕಡೆಗೆ ಸಾಗುತ್ತಿತ್ತು. ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ಮೇಘಾ, ಯು.ಬಿ.ಮಿಸ್ತ್ರಿ, ಎಂ.ಎಂ.ಮುಲ್ಲಾ ಅವರನ್ನು ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.