ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಟ್ಕಳ | ವಿದ್ಯುತ್ ಕಂಬ ಬಿದ್ದು ಕಾರ್ಮಿಕ ಸಾವು

Published 22 ಜೂನ್ 2024, 13:57 IST
Last Updated 22 ಜೂನ್ 2024, 13:57 IST
ಅಕ್ಷರ ಗಾತ್ರ

ಭಟ್ಕಳ: ಪಟ್ಟಣದ ಸಾಗರ ರಸ್ತೆಯಲ್ಲಿ ಹೆಸ್ಕಾಂ ಕಂಬ ಬದಲಾವಣೆ ಮಾಡುವ ಸಮಯದಲ್ಲಿ ಆಕಸ್ಮಿಕವಾಗಿ ಜಾರಿ ಬಂದ ಕಂಬದಿಂದ ಗಾಯಗೊಂಡಿದ್ದ ಕಾರ್ಮಿಕ ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮುರುಡೇಶ್ವರದ ಕಟಗಾರಕೊಪ್ಪ ಮುಲ್ಲೆಪಾಲ ನಿವಾಸಿ ದಾಮೋದರ ಈರಯ್ಯ ಗೊಂಡ (33) ಮೃತಪಟ್ಟವರು. ಮುರುಡೇಶ್ವರದ ಅಣ್ಣಪ್ಪ ಗುಳ್ಳಾರಿ ಎನ್ನುವ ವಿದ್ಯುತ್ ಗುತ್ತಿಗೆದಾರನ ಬಳಿ ಕೆಲಸ ಮಾಡುತ್ತಿದ್ದ ಇವರು ಜೂನ್‌ 19 ರಂದು ಸಾಗರ ರಸ್ತೆಯಲ್ಲಿ ಕಂಬ ಬದಲಾವಣೆ ಮಾಡುವಾಗ ಆಕಸ್ಮಿಕವಾಗಿ ಕಂಬ ಜಾರಿ ಬಂದು ಎಡೆತೊಡೆಯ ಮೇಲೆ ಬಿದ್ದು ಗಂಭೀರ ಗಾಯವಾಗಿತ್ತು. ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಉಸಿರಾಟದ ತೊಂದರೆ ಕಂಡುಬಂದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT