ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳಲ್ಲಿ ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಿ’

ವಿಶ್ವ ತಂಬಾಕು ರಹಿತ ದಿನ ಆಚರಣೆ
Last Updated 31 ಮೇ 2019, 11:02 IST
ಅಕ್ಷರ ಗಾತ್ರ

ಶಿರಸಿ: ತಂಬಾಕು ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳು ಬರುತ್ತವೆ. ಇದರ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ತಂಬಾಕು ವ್ಯಸನವನ್ನು ದೂರವಾಗಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುನೀತಾ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ, ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶುಕ್ರವಾರ ಇಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾಮಾನ್ಯ ಜನರಲ್ಲಿ ಅರಿವು ಮೂಡಿಸಬೇಕು. ಇದರಿಂದ ತಂಬಾಕು ರಹಿತ ಸಮಾಜ ಕಟ್ಟಲು ಸಾಧ್ಯ. ತಂಬಾಕಿನಿಂದ ಮಾರಕ ರೋಗಗಳಿಗೆ ತುತ್ತಾಗಿ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದಾರೆ. ಚಿಕ್ಕ ಮಕ್ಕಳಲ್ಲಿ ಅರಿವು ಮೂಡಿಸಿದರೆ ಭವಿಷ್ಯದಲ್ಲಿ ಅವರು ತಂಬಾಕು ಸೇವನೆಯಿಂದ ದೂರವಿರಬಹುದು ಎಂದರು.

ಡಾ.ಕೃಷ್ಣಮೂರ್ತಿ ರಾಯ್ಸದ್ ವಿಶೇಷ ಉಪನ್ಯಾಸ ನೀಡಿ, ‘ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ ಚಿತ್ರ ಮಂದಿರ, ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ಇದರ ಫಲಿತಾಂಶ ದೊರೆಯುತ್ತಿಲ್ಲ. ಮಹಿಳೆಯರು, ಮಕ್ಕಳೆಂಬ ತಾರತಮ್ಯವಿಲ್ಲದೆ ಎಲ್ಲರೂ ತಂಬಾಕು ಸೇವನೆಗೆ ಬಲಿಯಾಗುತ್ತಿದ್ದಾರೆ’ ಎಂದರು. ನ್ಯಾಯಾಧೀಶರಾದ ನರೇಂದ್ರ ಬಿ.ಆರ್‌, ದಿವ್ಯಶ್ರೀ ಸಿ.ಎಂ, ಶಂಕರ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಇದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನರ್ಸಿಂಗ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ತಂಬಾಕು ದುಷ್ಪರಿಣಾಮದ ಅರಿವು ಜಾಥಾ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT