ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

Published 10 ಜುಲೈ 2024, 4:40 IST
Last Updated 10 ಜುಲೈ 2024, 4:40 IST
ಅಕ್ಷರ ಗಾತ್ರ

ಕಾರವಾರ: ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ (75) ಮಂಗಳವಾರ ರಾತ್ರಿ ಹೊನ್ನಾವರದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು ಪುತ್ರರು ಇದ್ದಾರೆ.

ಖಳ ಮತ್ತು ಸಾತ್ವಿಕ ಎರಡೂ ರೀತಿಯ ಪಾತ್ರಗಳನ್ನೂ ಸಮರ್ಥವಾಗಿ ಪ್ರಸ್ತುತ ಪಡಿಸುತ್ತಿದ್ದ ಅವರು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದರು.

ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆ ಅವರ ಗರಡಿಯಲ್ಲಿ ಶ್ರೇಷ್ಠ ಕಲಾವಿದರಾಗಿ ರೂಪುಗೊಂಡಿದ್ದರು.

ಗುಂಡಬಾಳ, ಇಡಗುಂಜಿ, ಬಚ್ಚಗಾರು, ಶಿರಸಿ, ಪಂಚಲಿಂಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆ ಗೈದಿದ್ದರು. ಶಿರಸಿ ಮೇಳದಲ್ಲಿ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ, ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

'ಸರಳತೆ ಮೈಗೂಡಿಸಿಕೊಂಡ ಕಲಾವಿದರಾಗಿದ್ದ ಮಹಾದೇವ ಅವರ ನಿಧನ ಯಕ್ಷಗಾನ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ' ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ , ಕಾರ್ಯದರ್ಶಿ ಮುರಳಿ ಕಡೆಕಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT